ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ನೈಋತ್ಯ ರೈಲ್ವೆ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಹೀ ಸೇವಾ 2025 ಅಂಗವಾಗಿ ಆಯೋಜಿಸಿದ್ದ ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಯಿತು.
ಸ್ವಚ್ಛೋತ್ಸವ – ಸ್ವಚ್ಛತಾ ಹೀ ಸೇವಾ 2025 ಅಂಗವಾಗಿ, ಹುಬ್ಬಳ್ಳಿ ರೈಲ್ವೆ ವಿಭಾಗವು ಒಂದು ದಿನ ಒಂದು ಗಂಟೆ ಎಲ್ಲರು ಸೇರಿ ಎಂಬ ಪರಿಕಲ್ಪನೆಯಡಿ ಶ್ರಮದಾನ ಕಾರ್ಯಕ್ರಮವನ್ನು ಎಸ್’ಎಸ್’ಎಸ್ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು.ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಬೇಲಾ ಮೀನಾ ಮತ್ತು ಹಿರಿಯ ರೈಲ್ವೆ ಅಧಿಕಾರಿಗಳು ಶ್ರಮದಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನಿಲ್ದಾಣದ ಆವರಣವನ್ನು ಸ್ವಚ್ಛಗೊಳಿಸಿದರು.
ಕೆಳಸೇತುವೆಗೆ ಬಣ್ಣ ಬಳೆದು ಚಿತ್ರಗಳು ಬಿಡಿಸಿ ಕಲಾತ್ಮಕವಾಗಿ ಅಲಂಕರಿಸಲಾಯಿತು. ಈ ಮೂಲಕ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವವನ್ನು ತೋರಿಸಿದರು.
ಈ ಶ್ರಮದಾನ ಕಾರ್ಯಕ್ರಮವು ಜನರಲ್ಲಿನ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ, ಆರೋಗ್ಯ ರಕ್ಷಣೆ, ಸ್ವಚ್ಛ ಮತ್ತು ಹಸಿರಿನ ಪರಿಸರ ನಿರ್ಮಾಣಕ್ಕೆ ಪಾತ್ರ ವಹಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post