ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ತನ್ನ ಮನೆಯಲ್ಲಿ ಜಗಳವಾಡಿಕೊಂಡು ಸಂಬಂಧಿಕರ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬರ ಮಟನ್ ಶಾಪ್’ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೆಹಬೂಬ್ ನಗರದಲ್ಲಿ ನಡೆದಿದೆ.
ಬೆಳಗಾವಿಯ ಸವದತ್ತಿ ತಾಲೂಕಿನ ಬೆಳವಾಡಿ ಗ್ರಾಮದ ಅಶ್ವಾಕ್ ಬೇಪಾರಿ (52) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅಶ್ವಾಕ್ ತನ್ನ ಮನೆಯವರ ಜೊತೆಗೆ ಜಗಳ ಮಾಡಿಕೊಂಡು ಹುಬ್ಬಳ್ಳಿಯ ತನ್ನ ಸಂಬಂಧಿಕರ ಮನೆ ಬಂದಿದ್ದ. ತನ್ನ ಸಂಬಂಧಿಕರ ಮಟನ್ ಶಾಪ್’ನಲ್ಲಿ ಕೆಲಸ ಮಾಡಿಕೊಂಡಿದ್ದ. ಗುರುವಾರ ಸಂಜೆ ಅದೇ ಮಟನ್ ಶಾಪ್’ನಲ್ಲಿ ಆತ ಶವವಾಗಿ ಪತ್ತೆಯಾಗಿದ್ದು, ಮೃತನ ಹೊಟ್ಟೆ ಹಾಗೂ ಕುತ್ತಿಗೆಯಿಂದ ತೀವ್ರ ರಕ್ತ ಸ್ರಾವವಾಗಿದೆ.
Also read: ದಸರಾ ರಜೆಯನ್ನು ಒಂದು ತಿಂಗಳಿಗೆ ವಿಸ್ತರಿಸಿ: ಹೊರಟ್ಟಿ ಮನವಿ
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post