ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ Former CM H.D. Kumarswamy ಅವರು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.
ಪ್ರಸ್ತುತ ವಿಧಾನಮಂಡಲ ಅಧಿವೇಶನ ಇದ್ದು, ಅದು ಮುಗಿದ ನಂತರವೇ ಜಲಧಾರೆ ದಿನಾಂಕವನ್ನು ಘೋಷಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.
ಒಟ್ಟು ಹದಿನೈದು ವಾಹನಗಳು ರಾಜ್ಯದ ಎಲ್ಲಾ ಕಡೆ ಸಂಚಾರ ಮಾಡಲಿವೆ. 180 ವಿಧಾನಸಭೆ ಕ್ಷೇತ್ರಗಳಲ್ಲಿ ಸಂಚರಿಸಿ 55ಕ್ಕು ಹೆಚ್ಚು ಕಡೆ ಪವಿತ್ರ ಜಲವನ್ನು ಕಲಶಗಳಲ್ಲಿ ಸಂಗ್ರಹ ಮಾಡಲಿವೆ. ಆ ಜಲವನ್ನು ತಂದು ಪಕ್ಷದ ರಾಜ್ಯ ಕಚೇರಿಯಲ್ಲಿ ಒಂದು ವರ್ಷ ಕಾಲ ಇತ್ತು ಪೂಜೆ ಮಾಡಲಾಗುವುದು ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post