ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಇಲ್ಲಿನ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ರಾಜ್ಯ ಹೈಕೋರ್ಟ್ ಧಾರವಾಡ ಪೀಠ ಅಸ್ತು ಎಂದಿದ್ದು, ಈ ವಿಚಾರದಲ್ಲಿ ಅಂಜುಮನ್ ಎ ಇಸ್ಲಾಂ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ.
ಈ ಕುರಿತಂತೆ ಮಹತ್ವದ ತೀರ್ಪು ನೀಡಿ, ಅಂಜುಮನ್-ಎ-ಇಸ್ಲಾಂ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್, High Court ಮೈದಾನವು ಹುಬ್ಬಳ್ಳಿ-ಧಾರವಾಡ ನಗರಭೆಯ Hubli-Dharwada ಆಸ್ತಿಯಾಗಿದೆ. ಅವರು ಬಯಸಿದವರಿಗೆ ಭೂಮಿಯನ್ನು ನೀಡಬಹುದು ಎಂದು ಹೇಳಿದೆ.

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ Ganesha festival ಪ್ರತಿಷ್ಠಾಪನೆಗೆ ಅನುಮತಿ ನೀಡಿ ಮಹಾನಗರ ಪಾಲಿಕೆ ನಿರ್ಣಯ ಅಂಗೀಕರಿಸಿದೆ. ಆದರೆ, ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಪಾಲಿಕೆ ಆಯುಕ್ತರು ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಿಲ್ಲ. ಆಯುಕ್ತರ ನಡೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂಪರ ಪರ ಸಂಘಟನೆಯ ಮುಖಂಡರು ಸಿಹಿ ಹಂಚಿ ಸಂಭ್ರಮಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post