ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಪಕ್ಷಕ್ಕಾಗಿ ದುಡಿದ ನನ್ನ ಪತಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ವಿಶ್ವಾಸ ದ್ರೋಹ ಮಾಡಿದೆ ಎಂದು ಅವರ ಪತ್ನಿ ಶಿಲ್ಪಾ ಶೆಟ್ಟರ್ ಕಣ್ಣೀರು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಕೇಟ್ ದೊರೆಯದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ಪಕ್ಷಕ್ಕಾಗಿ ನಮ್ಮ ಪತಿ ಬಹಳಷ್ಟು ದುಡಿದಿದ್ದಾರೆ. ಇಂತಹ ವ್ಯಕ್ತಿಗೆ ಟಿಕೇಟ್ ನೀಡದಿರುವ ಮೂಲಕ ವಿಶ್ವಾಸದ್ರೋಹ ಮಾಡಿದೆ ಎಂದು ಕಿಡಿ ಕಾರಿದ್ದಾರೆ.
ಕಾಂಗ್ರೆಸ್ ಸೇರಿದ ನಂತರ ಜಗದೀಶ್ ಶೆಟ್ಟರ್ ತಮ್ಮ ನಿವಾಸಕ್ಕೆ ಆಗಮಿಸಿದ ವೇಳೆ ಭಾವುಕರಾದ ಶಿಲ್ಪ ಕಣ್ಣೀರು ಹಾಕಿದರು. ತಮ್ಮ ಪತ್ನಿಯನ್ನು ಸಮಾಧಾನ ಪಡಿಸುವ ಕಾರ್ಯವನ್ನು ಜಗದೀಶ್ ಶೆಟ್ಟರ್ ಮಾಡಿದರು.
Also read: ಬೀದರ್ ಉತ್ತರ ಪ್ರಭಾವಿ ನಾಯಕ ಸೂರ್ಯಕಾಂತ್ ನಾಗಮರಪಳ್ಳಿ ಜೆಡಿಎಸ್ ಸೇರ್ಪಡೆ
ಅಲ್ಲದೇ, ಈ ಬಾರಿಯ ಚುನಾವಣೆಯಲ್ಲಿ ನಾವು ನಿಮ್ಮೊಂದಿಗಿದ್ದೇವೆ, ಎಂತಹುದೇ ಪರಿಸ್ಥಿತಿಯಲ್ಲಿ ನಿಮ್ಮನ್ನು ಗೆಲ್ಲಿಸುತ್ತೇವೆ ಎಂದು ಕಾರ್ಯಕರ್ತರು ಈ ಸಂದರ್ಭದಲ್ಲಿ ಹೇಳಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















