ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ವಕ್ಪ್ #Wakf ಕಾಯ್ದೆ ತಿದ್ದುಪಡಿಗೆ ಸಂವಿಧಾನ ಬದ್ದವಾಗಿ ಸಂಸತ್ತಿನ ಜಂಟಿ ಸದನ ಸಮಿತಿ ರಚನೆಯಾಗಿದ್ದು, ಸಮಿತಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಪ್ ಸಂಸದೀಯ ಮಂಡಳಿ ಕರ್ನಾಟಕಕ್ಕೆ ಬೇಟಿರುವುದಕ್ಕೆ
ಅದೊಂದು ಯಾವುದೇ ಆಧಾದರಹಿತವಾದ ಸಮಿತಿ ಎಂದು ಕಾಂಗ್ರೆಸ್ ನವರು ಮಾಡಿರುವ ಆರೋಪಕ್ಕೆ ಅವರು ಉತ್ತರ ಕೊಟ್ಟರು.

ಈ ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು, ಓಲೈಕೆ ರಾಜಕಾರಣ ಮಾಡಲು ಆರೋಪ ಮಾಡುತ್ತಿದ್ದಾರೆ. ಅವರಿಗೆ ಸಂವಿಧಾನದ ಬಗ್ಗೆ ಸಂಸತ್ತಿನ ಬಗ್ಗೆಯೂ ಗೌರವ ಇಲ್ಲ ಎಂದು ಕಿಡಿ ಕಾರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post