ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಎಐಸಿಸಿ ಅಧ್ಯಕ್ಷರು ಪ್ರಧಾನಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು PM Narendra Modi ವಿಷ ಸರ್ಪಕ್ಕೆ ಹೋಲಿಸಿದಾಗ, ಖರ್ಗೆ ಜೀವನದ ಸಾಧನೆ ಮಣ್ಣುಪಾಲಾಯ್ತು. ಆನೆ ಗಾತ್ರದ ಮೋದಿಯವರ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ ಎಂದು ತಂದೆ – ಮಗ ಇಬ್ಬರ ವಿರುದ್ಧವೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ KSEshwarappa ಕಿಡಿ ಕಾರಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಜರಂಗದಳವನ್ನು ನಿಷೇಧ ಮಾಡುವ ವಿಚಾರದಲ್ಲಿ ಅವರಲ್ಲೇ ಗೊಂದಲವಿದೆ. ಭಾರತ ಸಂಸ್ಕೃತಿಯ ರಕ್ಷಣೆಗಿರುವ ಸಂಘಟನೆ ಬಜರಂಗದಳ. ಪಿಎಫ್‌ಐಗೆ ಹೋಲಿಸಿದ್ದು, ದೊಡ್ಡ ದುರಂತ. ಹಿಂದೂಗಳನ್ನು ಪಕ್ಕಕ್ಕೆ ಸರಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಮುಸಲ್ಮಾನರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ ಕೆಲಸವಾಗಿದೆ ಎಂದು ಲೇವಡಿ ಮಾಡಿದರು.

Also read: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತ ದಿವಾಳಿ: ಬಿ.ವೈ. ವಿಜಯೇಂದ್ರ ಭವಿಷ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post