ಕಲ್ಪ ಮೀಡಿಯಾ ಹೌಸ್
ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಸ್ಮಾರ್ಟ್ ಸಿಟಿ ಲಿಮಿಟೆಡ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ವತಿಯಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ನಡೆದಿರುವ ಅಭಿವೃದ್ಧಿ ಯೋಜನೆಗಳ ಪ್ರಗತಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮತ್ತು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಅವರ ಸಹಯೋಗದೊಂದಿಗೆ ಬುಧವಾರ ಬೆಳಿಗ್ಗೆ ಸಭೆ ನಡೆಯಿತು.
ಧಾರವಾಡ ಶಾಸಕ ಅಮೃತ ಅಯಪ್ಪ ದೇಸಾಯಿ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಬಿ.ಬಿ. ಕಾವೇರಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಯುಕ್ತ ಸುರೇಶ್ ಹಿಟ್ನಾಳ್, ಸ್ಮಾರ್ಟ್ ಸಿಟಿ ಎಂ.ಡಿ. ಶಕೀಲ್ ಅಹ್ಮದ್, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ನಾಗೇಶ್ ಕಲ್ಬುರ್ಗಿ ಸೇರಿದಂತೆ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post