ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ರಾಜ್ಯದಾದ್ಯಂತ ಕೊರೋನಾ ಸೋಂಕು ತಡೆಗಟ್ಟುವ ಸಲುವಾಗಿ ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತಾಗಿ ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗಟ್ಟಲು ಚಿತ್ರಮಂದಿರ ಮತ್ತು ಮಾಲ್’ಗಳಲ್ಲಿ ಶೇ. 50ರಷ್ಟು ಮಾತ್ರ ಪ್ರವೇಶ, ನೈಟ್ ಕರ್ಫ್ಯೂ ಜಾರಿ ಪ್ರಸ್ತಾಪ ಸೇರಿದಂತೆ ಎಲ್ಲ ಪ್ರಸ್ತಾಪಗಳ ಬಗ್ಗೆ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ರಾಜ್ಯದಲ್ಲಿ ಒಮಿಕ್ರಾನ್ ಇಬ್ಬರಲ್ಲಿ ಕಂಡು ಬಂದಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು ಪತ್ತೆಯಾಗಿದ್ದು, ಇವರಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿಲ್ಲ ಎಂದರು.


ಕೋವಿಡ್ ತಡೆಗಟ್ಟಲು ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ತಜ್ಞರ ಸಲಹೆ ಪಡೆದೆ ತೀರ್ಮಾನಗಳನ್ನು ಕೈಗೊಳ್ಳುವುದಾಗಿ ಅವರು ತಿಳಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















