ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಪ್ರತಿಯೊಬ್ಬರೂ ದೈನಂದಿನ ಕೆಲಸ ಕಾರ್ಯಗಳಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ನೈಋತ್ಯ ರೈಲ್ವೆ #Southwestern Railway ಪ್ರಧಾನ ವ್ಯವಸ್ಥಾಪಕ ಮುಕುಲ್ ಶರಣ್ ಮಾಥುರ್ ಕರೆ ನೀಡಿದರು.
ನೈಋತ್ಯ ರೈಲ್ವೆ ಪ್ರಧಾನ ಕಚೇರಿಯಾದ ರೈಲ್ ಸೌಧದಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಧಾನ ಕಚೇರಿಯ ಎಲ್ಲ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಸಂವಿಧಾನದ ಪ್ರಸ್ತಾವನೆಯ ಪ್ರತಿಗಳನ್ನು ವಿತರಿಸಲಾಯಿತು.
ಇದೇ ಮಾದರಿಯ ಕಾರ್ಯಕ್ರಮಗಳನ್ನು ನೈಋತ್ಯ ರೈಲ್ವೆಯ ವಿಭಾಗೀಯ ಕಚೇರಿಗಳಲ್ಲಿಯೂ ಆಯೋಜಿಸಲಾಗಿತ್ತು. ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ವಿಭಾಗಗಳ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ತಮ್ಮ ತಮ್ಮ ವಿಭಾಗಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಂವಿಧಾನದ ಪ್ರಸ್ತಾವನೆಯನ್ನು ಪಠಿಸುವ ಮೂಲಕ ಸಂವಿಧಾನ ದಿನಾಚರಣೆಗೆ ಕೈಜೋಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post