ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಶಾಲೆಗಳಿಗೆ ದಸರಾ ರಜೆಯನ್ನು ಒಂದು ತಿಂಗಳಿಗೆ ವಿಸ್ತರಣೆ ಮಾಡಿ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ Basavaraja Horatti ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅವರು, ಹಿಂದಿನಿಂದಲೂ ದಸರಾಗೆ ಒಂದು ತಿಂಗಳು ರಜೆ ಕೊಡಲಾಗುತ್ತಿತ್ತು. ಹಾಗೇ ಎರಡು ತಿಂಗಳ ಬೇಸಿಗೆ ರಜೆ ನೀಡಲಾಗುತ್ತಿತ್ತು. ಆದರೆ ಈ ಬಾರಿ ಕೇವಲ 15 ದಿನ ರಜೆ ನೀಡಿರುದು ಸರಿಯಲ್ಲ. ದಸರಾ ಮತ್ತು ದೀಪಾವಳಿ ಹಬ್ಬ ಎರಡೂ ಒಂದೇ ತಿಂಗಳಲ್ಲಿ ಬಂದಿವೆ. ಹೀಗಾಗಿ ಈ ಎರಡೂ ಹಬ್ಬ ಮುಗಿಯೋವರೆಗೆ ರಜೆ ಕೊಡಬೇಕಾಗಿತ್ತು ಎಂದು ಆಗ್ರಹಿಸಿದ್ದಾರೆರೆ.
Also read: ಗಮನಿಸಿ! ಅ.17, 19ರಂದು ಆಯನೂರು, ತಮ್ಮಡಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post