ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಈ ಹಿಂದೆ ಸಂಚರಿಸುತ್ತಿದ್ದ ಗದಗ-ಧಾರವಾಡ ನಡುವಿನ ಪ್ಯಾಸೆಂಜರ್ ರೈಲನ್ನು #Passenger Train ಪುನಾರಂಭಿಸುವ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರವೇ ಆರಂಭವಾಗಲಿದೆ.
ಈ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, #Minister Prahlad Joshi ಈ ಹಿಂದೆ ಗದಗ-ಧಾರವಾಡ ನಡುವೆ ಓಡಾಡುತ್ತಿದ್ದ ಪ್ಯಾಸೆಂಜರ್ ರೈಲನ್ನು ಆರಂಭಿಸಬೇಕು ಎಂಬ ಬೇಡಿಕೆ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಂದ ಹೆಚ್ಚಾಗಿದೆ. ಹೀಗಾಗಿ ರೈಲ್ವೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿಈ ರೈಲು ಪುನಃ ಆರಂಭಕ್ಕೆ ನಿರ್ಧರಿಸಲಾಗಿದ್ದು, ಶೀಘ್ರವೇ ಗದಗ-ಧಾರವಾಡ ಪ್ಯಾಸೆಂಜರ್ ರೈಲು ಆರಂಭವಾಗಲಿದೆ ಎಂದರು.

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಪೂರಕವಾಗಿ ಧಾರವಾಡ-ಬೆಳಗಾವಿ ನಡುವಿನ ರೈಲು ಮಾರ್ಗದ ಯೋಜನೆ ಕೆಲವಡೆ ಭೂಸ್ವಾಧೀನಕ್ಕೆ ತೊಡಕುಂಟಾಗಿದೆ. ಬೆಳಗಾವಿ ಭಾಗದಲ್ಲಿಆಗಿರುವ ಭೂಸ್ವಾದೀನ ಸಮಸ್ಯೆಯನ್ನು ಸಂಸದ ಜಗದೀಶ ಶೆಟ್ಟರ್ ಅವರು ಬಗೆ ಹರಿಸಿದ್ದಾರೆ. ಧಾರವಾಡ ಭಾಗದಲ್ಲಿ 42 ಎಕರೆ ಭೂಸ್ವಾಧೀನಕ್ಕೆ ಕೆಲ ರೈತರಿಂದ ಆಕ್ಷೆಪ ವ್ಯಕ್ತವಾಗಿದೆ. ತಕ್ಷಣವೇ ಜಿಲ್ಲಾ ಉಸ್ತುವಾರಿ ಸಚಿವರು ಈ ಸಮಸ್ಯೆಯನ್ನು ಬಗೆಹರಿಸಿ ರೈಲು ಮಾರ್ಗ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ವಿಶ್ವದ ಅತೀ ಉದ್ದದ ರೈಲ್ವೆ ಪ್ಲಾಟ್’ಫಾರ್ಮ್ ಹೊಂದಿರುವ ಹುಬ್ಬಳ್ಳಿ ಸದ್ಗುರು ಸಿದ್ದಾರೂಢ ಸ್ವಾಮಿ ರೈಲು ನಿಲ್ದಾಣವನ್ನು ಹೈಟೆಕ್ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಹುಬ್ಬಳ್ಳಿ ನಿಲ್ದಾಣವನ್ನು ಹೈಟೆಕ್ ಆಗಿ ಮೇಲ್ದರ್ಜೆಗೇರಿಸುವ ವಿಚಾರದಲ್ಲಿ ಈಗಾಗಲೇ ರೈಲ್ವೆ ಇಲಾಖೆ ಅಧಿಕಾರಿಗಳು ಪ್ರಸ್ತಾವನೆ ಸಿದ್ಧಪಡಿಸಿದ್ದಾರೆ. ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ಪ್ರಸ್ತಾವವನ್ನು ರೈಲ್ವೆ ಬೋರ್ಡ್’ಗೆ ಸಲ್ಲಿಸಲಾಗುತ್ತಿದೆ. ರೈಲ್ವೆ ಬೋರ್ಡ್’ಗೆ ಪ್ರಸ್ತಾವ ಸಲ್ಲಿಸಿದ ಮೇಲೆ ಅದಕ್ಕೆ ಒಪ್ಪಿಗೆ ನೀಡುವಂತೆ ರೈಲ್ವೆ ಸಚಿವ ವೈಷ್ಣವಿ ಅಶ್ವಿನ್ ಅವರಿಗೆ ವೈಯಕ್ತಿಕವಾಗಿ ಮನವಿ ಮಾಡಲಾಗುವುದು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post