ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Union Minister Pralhad Joshi ಅವರು ಇಂದು ಹನುಮ ಜಯಂತಿ #Hanuma Jayanthi ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು.
ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ ಸಚಿವರು ರಾಮಧೂತ ಹನುಮನನ್ನು ಸ್ತುತಿಸುತ್ತ ಭಕ್ತಿ ಸಮರ್ಪಿಸಿದರು. ಶ್ರೀರಾಮ ಮತ್ತು ಹನುಮ ದೇವರ ಭಜನೆಗೈದು ದೇವರ ಕೃಪೆಗೆ ಪಾತ್ರರಾದರು.
ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post