ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ #Vande Bharath ರೈಲು ಸಂಚಾರಕ್ಕೆ ಸೆ.16ರಂದು ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ #Pralhad Joshi ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಅಂದು ಅಹ್ಮದಾಬಾದ್ ನಿಂದ ವರ್ಚುವಲ್ ಮೂಲಕ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜೋಶಿ ಹೇಳಿದ್ದಾರೆ.
ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದ್ದು, ಹುಬ್ಬಳ್ಳಿಯಿಂದ ಸೆ.18ರಿಂದ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯಿಂದ ವಾರದಲ್ಲಿ 3 ದಿನ: ವಾರದಲ್ಲಿ ಮೂರು ಬಾರಿ ಬುಧವಾರ, ಶುಕ್ರವಾರ, ರವಿವಾರ ಹುಬ್ಬಳ್ಳಿಯಿಂದ ಹಾಗೂ ಗುರುವಾರ, ಶನಿವಾರ, ಸೋಮವಾರದಂದು ಪುಣೆಯಿಂದ ವಂದೇ ಭಾರತ್ ಎಕ್ಸಪ್ರೆಸ್ ಸಂಚರಿಸಲಿದೆ.
ಕೊಲ್ಲಾಪುರ ಮೂಲಕ ಸಂಚರಿಸಲ್ಲ: ಇದು ಹುಬ್ಬಳ್ಳಿ-ಪುಣೆ ನಡುವೆ ನೇರವಾಗಿ ಸಂಚರಿಸಲಿದ್ದು ಕೋಲ್ಹಾಪುರ ಮೂಲಕ ಸಂಚರಿಸುವುದಿಲ್ಲ ಎಂದೂ ಸಚಿವರು ಸ್ಪಷ್ಟಪಡಿಸಿದ್ದಾರೆ.
ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಈ ರೈಲುನ್ನು ಪ್ರತಿ ದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸುವೆ. ಇದಕ್ಕಾಗಿ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರದಿಂದ ಉತ್ತರ ಕರ್ನಾಟಕ ಭಾಗದ ವಾಣಿಜ್ಯೋದ್ಯಮಕ್ಕೆ, ಕೈಗಾರಿಕಾ ವಸಾಹತುಗಳಿಗೆ ಅನಕೂಲವಾಗಲಿದೆ. ಅಲ್ಲದೇ, ಮುಂಬೈ ಸಂಪರ್ಕಕ್ಕೆ ಈ ಮಾರ್ಗ ಪ್ರಮುಖವಾಗಲಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post