ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ವರ್ಷದ 365 ದಿನಗಳು ಅವಿಶ್ರಮಿತವಾಗಿ ದಣಿವರಿಯದೇ ಕೆಲಸ ಮಾಡುವ ಶಕ್ತಿ, ಸ್ಪೂರ್ತಿ ನನ್ನಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳು ಕೆಲಸಮಯ ವಿಶ್ರಮಿಸಬೇಕೆನ್ನುವ ಎಂ.ಪಿ. ಕುಮಾರಸ್ವಾಮಿಯವರ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿ, ನಾನು ದಣಿವರಿಯದೇ ಕೆಲಸ ಮಾಡುವ ಶಕ್ತಿ ಹೊಂದಿದ್ದೇನೆ. ದಿನದಲ್ಲಿ ಕನಿಷ್ಟ 15 ತಾಸು ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ. 2023ರ ಚುನಾವಣೆಯಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ . ಈ ನಿಟ್ಟಿನಲ್ಲಿ ತಯಾರಿಯನ್ನು ಮಾಡಲಾಗುವುದು ಎಂದು ತಿಳಿಸಿದರು.
ಇಂದು ಮತ್ತು ನಾಳೆ ಬಿಜೆಪಿ ಪಕ್ಷದ ಕಾರ್ಯಕಾರಣಿ ಸಭೆ ನಡೆಯಲಿದ್ದು, ಪಕ್ಷದ ಸಂಘಟನೆ ಹಾಗೂ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಕಾರ್ಯಕಾರಣಿ ಸಭೆಯ ಕಾರ್ಯಸೂಚಿ ಮತ್ತು ಪಕ್ಷದ ರಾಜ್ಯಧ್ಯಕ್ಷರು ಮತ್ತು ಅರುಣ್ ಸಿಂಗ್ ಅವರು ನಿರ್ಧರಿಸಲಿದ್ದಾರೆ ಎಂದರು.
ಬಿಡಿಎ ಮೇಲೆ ಎಸಿಬಿ ದಾಳಿಗೆ ಸಂಬಂಧಪಟ್ಟಂತೆ ಎಫ್‍ಐಆರ್ ಸಲ್ಲಿಸಲು ಅನುಮತಿ ಕೋರಿದ್ದಾರೆ. ಆಂತರಿಕ ವಿಜಿಲೆನ್ಸ್ ಸೆಲ್‍ನಿಂದ ಬರುವ ಪ್ರಸ್ತಾವನೆಗೆ ತಡಮಾಡದೇ ಅನುಮತಿ ಕೊಡಲಾಗುವುದು ಎಂದು ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post