No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್‌ ಚಿಕಿತ್ಸೆ ಸಿಗುತ್ತಿಲ್ಲ : ಸಚಿವ ಸುಧಾಕರ್‌

ಸರ್ಕಾರ ಪೂರೈಸಿರುವ ವೆಂಟಿಲೇಟರ್‌ಗಳ ಬಳಕೆ ಆಗುತ್ತಿಲ್ಲ: ತಜ್ಞರನ್ನು ತಾಲ್ಲೂಕುಗಳಿಗೆ ಪಾಳಿಯಲ್ಲಿ ನಿಯೋಜಿಸಲು ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 22, 2021
in ಹುಬ್ಬಳ್ಳಿ-ಧಾರವಾಡ
0
ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್‌ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ಕೋವಿಡ್‌ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಮತ್ತು ಸಂಸ್ಥೆಯ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಿದ ಬಳಿಕ ಸಂಸ್ಥೆಯ ಮುಖ್ಯಸ್ಥರು ಹಾಗೂ ನಾನಾ ವಿಭಾಗಗಳ ಮುಖ್ಯಸ್ಥರನ್ನು ಉದ್ದೇಶಿಸಿ ಶನಿವಾರ ಸಚಿವರು ಮಾತನಾಡಿದರು.

ಸಂಸ್ಥೆಯಲ್ಲಿ ಹೆಚ್ಚು ಕಡಿಮೆ ಒಂದು ಸಾವಿರ ಮಂದಿ ವೈದ್ಯರು ಇದ್ದಾರೆ. 1030 ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಮಾಣದಲ್ಲಿ ವೈದ್ಯರು ರೋಗಿಗಳ ಅನುಪಾತ ಯಾವ ದೇಶದಲ್ಲೂ ಇಲ್ಲ. ಎಷ್ಟು ಪರಿಣಾಮಕಾರಿಯಾಗಿ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದೇವೆ ಎಂಬುದನ್ನು ನೀವೆ ಪ್ರಶ್ನೆ ಮಾಡಿಕೊಳ್ಳಬೇಕು, ಇತರೆ ಸಿಬ್ಬಂದಿಯನ್ನು ಲೆಕ್ಕ ಹಾಕಿದರೆ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಮಂದಿ ಇದ್ದೀರಿ. ಆದರೆ ನಿರೀಕ್ಷಿತ ಪ್ರಮಾಣದ ಆರೋಗ್ಯ ಸೇವೆ ಏಕೆ ಲಭ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ನ್ಯಾಯ ಸಮ್ಮತ ಬಳಕೆ ಆಗಲಿ
ಆಕ್ಸಿಜನ್‌ ಮತ್ತು ಸ್ಟಿರಾಯ್ಡ್‌ನ ನ್ಯಾಯ ಸಮ್ಮತ ಬಳಕೆ ಆಗಬೇಕು. ಅದಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಬೇಕು. ಪ್ರತಿದಿನ ಇವುಗಳ ಆಡಿಟ್‌ ಮಾಡಬೇಕು. ಕೋವಿಡ್‌ಯೇತರ ರೋಗಿಗಳಿಗೆ ತುರ್ತು ಇದ್ದಲ್ಲಿ ಮಾತ್ರ ಚಿಕಿತ್ಸೆಗೆ ತೆಗೆದುಕೊಳ್ಳಬೇಕು. ಈ ಭಾಗದಲ್ಲಿ ಕೆಮ್ಸ್‌ ಪ್ರಾದೇಶಿಕ ಆರೋಗ್ಯ ಕೇಂದ್ರ ಆಗಿರುವುದರಿಂದ ಶೇಕಡಾ 75 ರಷ್ಟು ಹಾಸಿಗೆ ಕೋವಿಡ್‌ಗೆ ಬಳಕೆ ಮಾಡಬೇಕು ಎಂದು ಸೂಚನೆ ನೀಡಿದರು.

ಹಿರಿಯ ವೈದ್ಯರು, ತಜ್ಞರು, ಬೇರೆ ಬೇರೆ ವಿಭಾಗಗಳ ಮುಖ್ಯಸ್ಥರು ಕೋವಿಡ್‌ ವಾರ್ಡುಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ದೂರುಗಳು ಬಂದಿವೆ. ಅದು ನಿಜವೂ ಇದೆ ಎಂದು ತಿಳಿದುಬಂದಿದೆ. ಕೆಲವರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವವರು ಬಂದು ಸಹಿ ಮಾಡಿ ಹೋಗುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಕೆಲವರಿಂದ ಇಡೀ ಸಂಸ್ಥೆಗೆ ಕೆಟ್ಟ ಹೆಸರು ಬರುತ್ತಿದೆ. ಇಂತವರ ಬಗ್ಗೆ ನಿರ್ದೇಶಕರು ತಕ್ಷಣ ಕ್ರಮ ಕೈಗೊಳ್ಳಬೇಕು. ಇವರಿಂದ ಕೆಲಸ ಮಾಡುವ ಇತರರ ಉತ್ಸಾಹ ಕುಗ್ಗುತ್ತದೆ. ಕೆಸಲ ಕದಿಯುತ್ತಿರುವ ಇಂತಹವರು ಎಷ್ಟೇ ದೊಡ್ಡವರಿದ್ದರೂ ಸರಿಯೇ ಮುಲಾಜಿಲ್ಲದೆ, ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿ ಎಂದು ನಿರ್ದೇಶಕರಿಗೆ ಸೂಚನೆ ನೀಡಿದರು.

ವಿಭಾಗ ಮುಖ್ಯಸ್ಥರು ಹೊಣೆ
ಇನ್ನೊಂದು ತಿಂಗಳು ಕಷ್ಟಪಟ್ಟು ಕೆಲಸ ಮಾಡಿ. ಸಾವುಗಳನ್ನು ತಪ್ಪಿಸಿ. ಪ್ರತಿ ಜೀವಕ್ಕೂ ಬೆಲೆಯಿದೆ. ನಾವ್ಯಾರು ಬಲವಂತದಿಂದ ವೈದ್ಯ ವೃತ್ತಿಗೆ ಬಂದಿಲ್ಲ. ಇಷ್ಟಪಟ್ಟು ಬಂದಿರುವಾಗ ಲೋಪಗಳಿಲ್ಲದಂತೆ ಕೆಲಸ ಮಾಡಬೇಕು. ಆತ್ಮ ವಂಚನೆ ಮಾಡಿಕೊಳ್ಳದೆ ಕೆಲಸ ಮಾಡಿ. ಕೆಲವರು ಮಾಡುವ ತಪ್ಪಿಗೆ ಎಲ್ಲರೂ ತಲೆತಗ್ಗಿಸುವಂತೆ ಆಗಬಾರದು ಎಂದು ಕಿವಿಮಾತು ಹೇಳಿದರು.

ವಿಭಾಗಗಳು ಮುಖ್ಯಸ್ಥರು ತಮ್ಮ ತಮ್ಮ ವಿಭಾಗಗಳಲ್ಲಿ ಶಿಸ್ತು ರೂಢಿಸುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಿ. ಅತ್ಯುತ್ತಮ ಗುಣಮಟ್ಟದ ಉಪಕರಣಗಳನ್ನು ನೀಡಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಔಷಧಗಳನ್ನು ರವಾನಿಸಲಾಗಿದೆ. ಕೊರತೆ ಇರುವುದನ್ನೂ ಒಂದೆರಡು ದಿನದಲ್ಲಿ ಕೊಡಲಾಗುತ್ತದೆ. ಇವೆಲ್ಲವನ್ನೂ ಪರಿಣಾಮಕಾರಿಯಾಗಿ ಬಳಕೆ ಮಾಡಿ. ಏನೇ ಸಮಸ್ಯೆ ಇದ್ದರೂ ಸ್ಥಳೀಯ ಸಚಿವರು, ಚುನಾಯಿತ ಪ್ರತಿನಿಧಿಗಳ ಸಹಕಾರ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಆಕ್ಸಿಜನ್‌ ಆಡಿಟ್‌ ಆಗಬೇಕು
ಪ್ರತಿ ರೋಗಿಗೆ ನೀಡುತ್ತಿರುವ ಆಕ್ಸಿಜನ್‌ ಆಡಿಟ್‌ ಆಗಲೇ ಬೇಕು. ಇಲ್ಲಿ ಅಧಿಕವಾಗಿ ಬಳಕೆ ಆಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ತಜ್ಞ ಸಿಬ್ಬಂದಿ ಇರುವುದರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ನಿಯೋಜನೆ ಮಾಡಿ ಅಲ್ಲಿನ ಸಿಬ್ಬಂದಿಗೆ ತರಬೇತಿ ಕೊಡಿಸುವ ವ್ಯವಸ್ಥೆ ಆಗಬೇಕು. ಜಿಲ್ಲಾಧಿಕಾರಿ ಅವರು ತಕ್ಷಣ ಈ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದು ಆದೇಶಿಸಿದರು.

ಹಗಲು ರಾತ್ರಿ ಪಾಳಿ ನಿಯೋಜನೆ ಮಾಡಬೇಕು. ಪ್ರತಿಯೊಂದು ಆಸ್ಪತ್ರೆಯಲ್ಲಿ ಅಲ್ಲಿಸ ಸಿಬ್ಬಂದಿ, ಹಾಸಿಗೆಯ ವಿವರಗಳನ್ನು ಫಲಕಗಳಲ್ಲಿ ಪ್ರದರ್ಶಿಸಬೇಕು. ಸಿಸಿಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಸಂಸ್ಥೆಗೆ ತಕ್ಷಣವೇ ನೋಡಲ್‌ ಅಧಿಕಾರಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮರಣ ಪ್ರಮಾಣ ಕಡಿಮೆ ಆಗಲೇಬೇಕು. ಪ್ರತಿದಿನ ನಲವತ್ತು ಸಾವುಗಳು ಸಂಭವಿಸುತ್ತಿವೆ. ಅದರೆ ಅವುಗಳಿಗೆ ಬೇರೆ ಬೇರೆ ಕಾರಣಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ದಾಖಲು ಮಾಡಿದ ಎಷ್ಟೇಷ್ಟು ತಾಸುಗಳಲ್ಲಿ ಸಾವು ಸಂಭವಿಸಿವೆ ಎಂಬ ವಿವರ, ಡೆತ್‌ ಆಡಿಟ್‌ ವರದಿಗಳು ಆಯಾ ದಿನವೇ ಸಿದ್ಧಪಡಿಸಿ ಕಳುಹಿಸಿಕೊಡಬೇಕು ಎಂದು ಸಂಸ್ಥೆಯ ನಿರ್ದೇಶಕರಿಗೆ ಸೂಚನೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CovidHubliKannada NewsKannada News LiveKannada News OnlineKannada News WebsiteKannada WebsiteKIMSLatest News KannadaMinister SudhakarNews in KannadaNews KannadaOxygenState Newsಆಕ್ಸಿಜನ್ಕಿಮ್ಸ್‌ಕೋವಿಡ್ಸಚಿವ ಡಾ. ಕೆ. ಸುಧಾಕರ್‌ಹುಬ್ಬಳ್ಳಿ
Share199Tweet123Send
Previous Post

ಬ್ಲಾಕ್ ಫಂಗಸ್ ಸೊಂಕು ತಡೆಗೆ ಮುಂಜಾಗೃತ ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Next Post

ಪತ್ರಕರ್ತರಿಗೆ ಲಸಿಕೆ ನೀಡಲು ಹಿಂದೇಟು: ಶಾಸಕರ ಮಧ್ಯ ಪ್ರವೇಶದಿಂದ ಬಗೆಹರಿದ ಗೊಂದಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಕರ್ತರಿಗೆ ಲಸಿಕೆ ನೀಡಲು ಹಿಂದೇಟು: ಶಾಸಕರ ಮಧ್ಯ ಪ್ರವೇಶದಿಂದ ಬಗೆಹರಿದ ಗೊಂದಲ

ಪತ್ರಕರ್ತರಿಗೆ ಲಸಿಕೆ ನೀಡಲು ಹಿಂದೇಟು: ಶಾಸಕರ ಮಧ್ಯ ಪ್ರವೇಶದಿಂದ ಬಗೆಹರಿದ ಗೊಂದಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

February 16, 2026
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

February 16, 2026
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

February 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

February 16, 2026
ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL