ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ರಾಜ್ಯ ಸರ್ಕಾರ ಬಿಡುಗಡೆ ಮಾಡಲು ಹೊರಟಿರುವುದು ಜಾತಿ ಗಣತಿ ಹೌದೊ ಅಲ್ಲವೋ ಎನ್ನುವುದು ಸ್ಪಷ್ಟವಾಗಲಿ, ಆ ವರದಿ ಪ್ರಕಟವಾದರೆ ಕೆಲವು ಸಮುದಾಯಗಳಿಗೆ ಅಸಮಾಧಾನವಾಗಲಿದೆಯಾ ಈ ಬಗ್ಗೆ ಮೊದಲು ಚರ್ಚೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲವೊ ಅನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸರ್ಕಾರ ಸ್ಪಷ್ಟತೆಯನ್ನು ನೀಡಬೇಕು ಎಂದರು.
Also read: ಪ್ಯಾಲೆಸ್ಟೈನ್ ಉಗ್ರರಿಗೆ ಕಾಂಗ್ರೆಸ್ ಬೆಂಬಲ: ಮಾಜಿ ಸಿಎಂ ಬೊಮ್ಮಾಯಿ ಕಿಡಿ
160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು ಯಾವ ಜಾತಿ ಸಮೀಕ್ಷೆ ಅನ್ನುವ ಸ್ಪಷ್ಟತೆ ಇಲ್ಲ. ಅದರ ಬಗ್ಗೆ ಸ್ಪಷ್ಟತೆಯನ್ನು ಸರ್ಕಾರ ಮೊದಲು ಕೊಡಲಿ. ವರದಿ ಆಧಾರದ ಮೇಲೆ ಸಾದಕ ಭಾದಕಗಳ ಕುರಿತು ಚರ್ಚಿಸೋಣ ಅಂತ ಕಾಂಗ್ರೆಸ್ಸಿನ ನಾಯಕರು ಹೇಳಿದ್ದಾರೆ. ಈ ಸಮೀಕ್ಷೆಯ ಫಲಶ್ರುತಿ ಸಮಾಜದ ಮೇಲೆ ಯಾವ ಪರಿಣಾಮ ಬೀರುತ್ತದೆ ಅದರ ಫಲಿತಾಂಶ ಏನಾಗುತ್ತದೆ? ಕೆಲವು ವರ್ಗದಲ್ಲಿ ಅಸಮಾಧಾನ ಉಂಟಾಗುತ್ತಾ ಈ ಬಗ್ಗೆ ಮೊದಲು ಚರ್ಚೆಯಾಗಲಿ CWC ಯಲ್ಲಿ ಜಾತಿ ಗಣತಿ ಜಾರಿ ಮಾಡುವ ಕುರಿತು ನಿರ್ಣಯ ತೆಗೆದುಕೊಂಡಿದೆ ಅವರು ಮಾಡಲಿ ಎಂದು ಹೇಳಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post