ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಮಾತೃಭಾಷೆಗಳೇ ಸಾರ್ವಭೌಮ. ಎಲ್ಲರೂ ಇದನ್ನು ಮನಗಂಡು ಗೌರವಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಅಜಯ ದೇವಗನ್ Ajay Devgan ಅವರ ಟ್ವೀಟ್ ಗೆ ಸುದೀಪ್ Sudeep ಅವರು ಪ್ರತಿಯಾಗಿ ಟ್ವೀಟ್ ಮಾಡಿರುವುದು ಸರಿ ಇದೆ. ನಮ್ಮ ರಾಜ್ಯಗಳು ಭಾಷಾವಾರು ಪ್ರಾಂತ್ಯಗಳಾದ ಮೇಲೆ ಆ ರಾಜ್ಯ ಗಳಲ್ಲಿ ಮಾತೃಭಾಷೆಗಳಿಗೆ ಪ್ರಾಧ್ಯಾನ್ಯತೆ ಇದೆ. ಅದೇ ಸಾರ್ವಭೌಮ. ಇದನ್ನು ಎಲ್ಲರೂ ಮನಗಂಡು ಗೌರವಿಸಬೇಕು ಎಂದು ಸಿಎಂ ಹೇಳಿದರು.
Also read: ಮೇ 2ರಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ: ಯಾವೆಲ್ಲಾ ದೇಶಗಳಿಗೆ ಭೇಟಿ ನೀಡಲಿದ್ದಾರೆ? ಇಲ್ಲಿದೆ ನೋಡಿ
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post