ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ತುರ್ತು ಚಿಕಿತ್ಸೆಗಾಗಿ ಝೀರೋ ಟ್ರಾಫಿಕ್’ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಸಹ ಫಲಕಾರಿಯಾಗದೇ ನವಜಾತ ಶಿಶು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ವಿಜಯಲಕ್ಷ್ಮೀ ಎನ್ನುವವರ ಮಗು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದೆ.
ಹೊಟ್ಟೆ ಮೇಲಿನ ಚರ್ಮ ಬೆಳೆಯದ ಹಿನ್ನೆಲೆಯಲ್ಲಿ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆ ಭಾಗದಲ್ಲಿ ಚರ್ಚ ಬೆಳೆಯದೇ ಕರುಳು, ಕಿಡ್ನಿ ಹೊರಬಂದಿತ್ತು.
ಶಿಶುವಿಗೆ ತುರ್ತು ಚಿಕಿತ್ಸೆಗಾಗಿ ಡಿ.28ರಂದು ಕೊಪ್ಪಳದಿಂದ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್’ನಲ್ಲಿ ಶಿಶುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಟ್ಟು 30 ಅಂಬುಲೆನ್’ಗಳನ್ನು ಬಳಸಲಾಗಿತ್ತು. ಆದರೂ, ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ.
ಕೊಪ್ಪಳ ಜಿಲ್ಲೆಯ ಕುಕುನೂರ ತಾಲೂಕಿನ ಬೂದಗುಂಪ ಗ್ರಾಮದ ವಿಜಯಲಕ್ಷ್ಮೀ ಅವರ ಮಗುವನ್ನು ಕುಕನೂರ ತಾಲೂಕಾ ಆಸ್ಪತ್ರೆಯಲ್ಲಿ 27ರ ರಾತ್ರಿ ಮಧ್ಯರಾತ್ರಿ ಹೆರಿಗೆಯಾಗಿತ್ತು. ಮಗುವಿನ ಕರಳು, ಕಿಡ್ನಿ ಹೊರಬಂದ ಹಿನ್ನೆಲೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ 28ರ ಬೆಳಗಿನ ಜಾವ 10 ಗಂಟೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಈ ವೇಳೆ ಝೀರೋ ಟ್ರಾಫಿಕ್’ನಲ್ಲಿ ನವಜಾತ ಶಿಶುವನ್ನು ಕರೆತರಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















