ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹುಬ್ಬಳ್ಳಿ: ನಗರದಲ್ಲಿ ಕ್ಯಾನ್ಸರ್ ಗೆ ಸೂಕ್ತ ಚಿಕಿತ್ಸೆ ನೀಡುವ ಆಸ್ಪತ್ರೆಯೊಂದನ್ನು ನಿರ್ಮಿಸಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಹುಬ್ಬಳ್ಳಿ ಕಿಮ್ಸ್ ನಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸೇರಿದಂತೆ ಹೊಸ ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹುಬ್ಬಳ್ಳಿ ವಾಣಿಜ್ಯ ನಗರವಾಗಿದ್ದು, ಇದನ್ನು ಆರೋಗ್ಯ ನಗರವಾಗಿ ರೂಪಿಸಬೇಕಿದೆ. ಈ ಭಾಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಬೇಕಿದೆ. ಕಿದ್ವಾಯಿಯ ಸಹಭಾಗಿತ್ವದಲ್ಲಿ, ಅದೇ ಗುಣಮಟ್ಟದ ಹೊಸ ಆಸ್ಪತ್ರೆ ನಿರ್ಮಿಸಬೇಕಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಜನರಿಗೆ ಬಹಳ ಅನುಕೂಲವಾಗಲಿದೆ ಎಂದರು.


ರಾಜ್ಯದಲ್ಲಿ 1 ಕೋಟಿ ಕೋವಿಡ್ ಪರೀಕ್ಷೆಗಳು ನಡೆದಿದ್ದು, ಕೋವಿಡ್ ರೋಗಿಗಳ ಚಿಕಿತ್ಸೆಗೆ 300 ಕೋಟಿ ರೂ.ಗೂ ಅಧಿಕ ಖರ್ಚು ಮಾಡಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post