No Result
View All Result
Mysuru say no to drugs walkathon dcp harsha students
English Articles

BEDA BRO Should Be Everyone’s Goal : Mysuru DCP Priyamvada calls for Drug-Free Society

by kalpa News
September 17, 2026
0

Kalpa Media House  |  Mysuru | Students have a crucial role to play in the fight against drug abuse, and...

Read moreDetails
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದಿಂದ ಪಿಂಚಣಿ ಅದಾಲತ್ ಯಶಸ್ವಿ

kalpa News by kalpa News
December 17, 2025
in ಹುಬ್ಬಳ್ಳಿ-ಧಾರವಾಡ
0
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದಿಂದ ಪಿಂಚಣಿ ಅದಾಲತ್ ಯಶಸ್ವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಲ್ಲಿ #South Western Railway Hubli Division ಆಯೋಜಿಸಲಾಗಿದ್ದ ಅಖಿಲ ಭಾರತ ಪಿಂಚಣಿ ಅದಾಲತ್ 2025 #Pension Adalat ಯಶಸ್ವಿಯಾಯಿತು.

ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಆರ್. ಪ್ರಸಾದ್ ಇಚಂಗಿಮಠ ಮಾತನಾಡಿ, ರೈಲ್ವೆಯ ಅಭಿವೃದ್ಧಿಯಲ್ಲಿ ನಿವೃತ್ತ ನೌಕರರು ವಹಿಸಿರುವ ಮಹತ್ವದ ಪಾತ್ರವನ್ನು ಸ್ಮರಿಸಿ, ಪಿಂಚಣಿದಾರರ ಕಲ್ಯಾಣಕ್ಕೆ ರೈಲ್ವೆ ಸದಾ ಆದ್ಯತೆ ನೀಡುತ್ತದೆ ಎಂದು ಭರವಸೆ ನೀಡಿದರು.

ಪಿಂಚಣಿದಾರರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಈ ಪಿಂಚಣಿ ಅದಾಲತ್ -2025 ಅನ್ನು ನಡೆಸಲಾಗಿದ್ದು, ಸೇವಾ ದಾಖಲೆಗಳಲ್ಲಿ ಉಂಟಾದ ವ್ಯತ್ಯಾಸಗಳು, ಪಿಂಚಣಿ ಪಾವತಿ ಆದೇಶಗಳು, ಸೆಟಲ್‌ಮೆಂಟ್ ಶೀಟ್’ಗಳು ಹಾಗೂ ಪಿಂಚಣಿ ಹೇಳಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅದಾಲತನಲ್ಲಿ  ಸೂಕ್ತವಾಗಿ ಪರಿಶೀಲಿಸಿ ಪರಿಹರಿಸಲಾಯಿತು. ಅಲ್ಲದೆ,  ಕುಟುಂಬ ಪಿಂಚಣಿ ಸಂಬಂಧಿತ ಸಮಸ್ಯೆಗಳನ್ನೂ ಸೂಕ್ತ ದಾಖಲೆಗಳ ಮೂಲಕ ಪರಿಹರಿಸಲಾಗಿದೆ ಎಂದರು.
ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕರಾದ ಡಾ. ಅನುಪ್ ಮಾತನಾಡಿ, ಕುಟುಂಬ ಪಿಂಚಣಿಯೂ ಸೇರಿದಂತೆ ವಿವಿಧ ಪಿಂಚಣಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಲೆಕ್ಕಪತ್ರ ವಿಭಾಗ ಕೈಗೊಂಡಿರುವ ವಿವಿಧ  ಕ್ರಮಗಳನ್ನು ವಿವರಿಸಿದರು.  ಸಿಬ್ಬಂದಿ ಹಾಗೂ ಲೆಕ್ಕಪತ್ರ ವಿಭಾಗಗಳ ಸಮನ್ವಯ ಕಾರ್ಯಕ್ಷಮತೆಯಿಂದ ಅದಾಲತ್’ನಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದಾಗಿ ಅವರು ಹೇಳಿದರು.

ಪಿಂಚಣಿದಾರರಿಗೆ ಮೆಡಿಕಲ್ ಮರುಪಾವತಿ ಸ್ವೀಕರಿಸುವ ಸಂದರ್ಭದಲ್ಲಿ ಯಾವುದೇ ಬ್ಯಾಂಕಿಂಗ್ ಸಂಬಂಧಿತ ತೊಂದರೆಗಳು ಎದುರಾದಲ್ಲಿ, ರೈಲ್ವೆ ಇಲಾಖೆ ತಕ್ಷಣ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪಿಂಚಣಿದಾರರು, ಪಿಂಚಣಿದಾರರ ಪ್ರತಿನಿಧಿಗಳು, ವಿವಿಧ ಸಂಘಟನೆಗಳ ಸದಸ್ಯರು, ಸಿಬ್ಬಂದಿ ಹಾಗೂ ಲೆಕ್ಕಪತ್ರ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಈ ಪಿಂಚಣಿ ಅದಾಲತ್’ಗೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಷ್ಣು ಗೌಡ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ/ಸಮನ್ವಯಕ/ಮೈಸೂರು, ಹರ್ಷವರ್ಧನ, ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕ/ಮೈಸೂರು ಹಾಗೂ  ಪೃಥ್ವಿ ಎಸ್. ಹುಲ್ಲತ್ತಿ, ವಿಭಾಗೀಯ ಹಣಕಾಸು ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ/ಮೈಸೂರು ಅವರು ಭಾಗವಹಿಸಿ, ಪಿಂಚಣಿದಾರರ ಅಹವಾಲುಗಳಿಗೆ ಪರಿಹಾರ ಒದಗಿಸಿದರು.
ಒಟ್ಟು 47 ಪಿಂಚಣಿದಾರರು ಈ ಪಿಂಚಣಿ ಅದಾಲತ್’ನಲ್ಲಿ ಭಾಗವಹಿಸಿದ್ದರು. ಅವರಲ್ಲಿ ಅದಾಲತ್ ದಿನದಂದು ಪ್ರತಿನಿಧಿಸಲಾದ ಎರಡು ಹೊಸ ಪ್ರಕರಣಗಳು ಸೆರಿದಂತೆ ಒಟ್ಟು 32 ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳಲಾಯಿತು. ಈ ಪೈಕಿ 16 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು ಉಳಿದ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ  ರೈಲ್ವೆ ಪಿಂಚಣಿದಾರರ ಕಲ್ಯಾಣ ಸಂಘ ಮೈಸೂರು, ಇದರ ಅಧ್ಯಕ್ಷರಾದ ಪಾರ್ಥಸಾರಥಿ ಅವರು, ಪಿಂಚಣಿದಾರರ ಅಹವಾಲುಗಳನ್ನು ಮೈಸೂರು ವಿಭಾಗವು ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಪರಿಹರಿಸುತ್ತಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಉಳಿದಿರುವ ಎಲ್ಲ ಅಹವಾಲುಗಳನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಭರವಸೆ ನೀಡಿದರು.
ರೈಲ್ವೆ ಪಿಂಚಣಿದಾರರ ಕಲ್ಯಾಣ ಸಂಘ, ಮೈಸೂರು ಇದರ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಸ್ವಾಮಿನಾಥನ್ ಹಾಗೂ ಸಂಘದ ಇತರ ಸದಸ್ಯರು ಕೂಡ ಪಿಂಚಣಿ ಅದಾಲತ್ನಲ್ಲಿ ಉಪಸ್ಥಿತರಿದ್ದರು.

ಪಿಂಚಣಿದಾರರು ಅದಾಲತ್’ನಲ್ಲಿ ತಮ್ಮ ಅಹವಾಲುಗಳನ್ನು ಮಂಡಿಸಿದ್ದು, ರೈಲ್ವೆ ಅಧಿಕಾರಿಗಳು ಅವುಗಳಿಗೆ ಸಮರ್ಪಕವಾಗಿ ಸ್ಪಷ್ಟನೆ ನೀಡಿದ್ದು, ಸಮಸ್ಯೆಗಳಿಗೆ ಪರಿಹಾರ ಒದಗಿಸಿದರು.

ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಇಂದು ಅಖಿಲ ಭಾರತ ಪಿಂಚಣಿ ಅದಾಲತ್-2025 ಅನ್ನು ಆಯೋಜಿಸಿತು. ನಿವೃತ್ತ ರೈಲ್ವೆ ನೌಕರರ ಪಿಂಚಣಿ ಸಂಬಂಧಿತ ಅಹವಾಲುಗಳನ್ನು ಪರಿಶೀಲಿಸಿ ಶೀಘ್ರ ಪರಿಹಾರ ಒದಗಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPension AdalatSouth Western Railway Hubli Divisionನೈಋತ್ಯ ರೈಲ್ವೆಯ ಹುಬ್ಬಳ್ಳಿಪಿಂಚಣಿ ಅದಾಲತ್ 2025ಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಟಿಕೇಟ್ ರಹಿತ, ಅಕ್ರಮ ಪ್ರಯಾಣ | ಗಳಿಕೆಯಲ್ಲಿ ನೈಋತ್ಯ ರೈಲ್ವೆ ಗಮನಾರ್ಹ ಬೆಳವಣಿಗೆ ದಾಖಲು

Next Post

ಪೋಷಕರು-ಮಕ್ಕಳ ಪಾರಂಪರಿಕ ಜ್ಞಾನಕ್ಕೆ ಸವಾಲು | ಡಿ.21ರಂದು ಮೈಸೂರು ಹೆರಿಟೇಜ್ ಟ್ರೆಷರ್ ಹಂಟ್ 

kalpa News

kalpa News

Next Post
ಪೋಷಕರು-ಮಕ್ಕಳ ಪಾರಂಪರಿಕ ಜ್ಞಾನಕ್ಕೆ ಸವಾಲು | ಡಿ.21ರಂದು ಮೈಸೂರು ಹೆರಿಟೇಜ್ ಟ್ರೆಷರ್ ಹಂಟ್ 

ಪೋಷಕರು-ಮಕ್ಕಳ ಪಾರಂಪರಿಕ ಜ್ಞಾನಕ್ಕೆ ಸವಾಲು | ಡಿ.21ರಂದು ಮೈಸೂರು ಹೆರಿಟೇಜ್ ಟ್ರೆಷರ್ ಹಂಟ್ 

Leave a Reply Cancel reply

Your email address will not be published. Required fields are marked *

No Result
View All Result
Mysuru say no to drugs walkathon dcp harsha students
English Articles

BEDA BRO Should Be Everyone’s Goal : Mysuru DCP Priyamvada calls for Drug-Free Society

by kalpa News
September 17, 2026
0

Kalpa Media House  |  Mysuru | Students have a crucial role to play in the fight against drug abuse, and...

Read moreDetails
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL