ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ನಗರ ಖಾಸಗಿ ಹೋಟೆಲ್ನಲ್ಲಿ ಸರಳವಾಸ್ತು ಜ್ಯೋತಿಷಿ ಚಂದ್ರಶೇಖರ್ ಗುರೂಜಿ Saralavasthu Chandrashekar Guruji ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ನಡೆದಿದೆ.
ಭಕ್ತರ ಸೋಗಿನಲ್ಲಿ ಬಂದ ವ್ಯಕ್ತಿಗಳು ಅಲ್ಲಿ ನೆರೆದಿದ್ದವರ ಎದುರಿನಲ್ಲೇ ಕೆಲವೇ ಸೆಕೆಂಡ್ಗಳಲ್ಲಿ 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಗುರೂಜಿಯವರ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದ ಅವರು ಸರಳ ವಾಸ್ತು ಸಲಹೆ ಬಗ್ಗೆ ಹಲವು ಪುಸ್ತಕಗಳನ್ನು ಬರೆದಿರುವ ಅವರು ವಾಣಿಜ್ಯ ವ್ಯವಹಾರ ಸಂಬಂಧ ಜುಲೈ ೨ರಿಂದ ಹೋಟೆಲ್ನಲ್ಲಿ ತಂಗಿದ್ದರು ಎನ್ನಲಾಗಿದೆ.
Also read: ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣಕ್ಕೆ ಅವಕಾಶ ಕಲ್ಪಿಸಿ: ಕ್ರೀಡಾಸಕ್ತರ ಮನವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post