ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹುಬ್ಬಳ್ಳಿ: ಪಾಕಿಸ್ಥಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಪೊಲೀಸರು ನಿನ್ನೆ ತಡರಾತ್ರಿ ಮತ್ತೆ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇಂದು ಮುಂಜಾನೆ ಆರೋಪಿಗಳನ್ನು 3ನೆಯ ಜೆಎಂಎಫ್’ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೂವರನ್ನೂ ಮಾರ್ಚ್ 2ರವರೆಗೂ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.
ಆರೋಪಿಗಳನ್ನು ಕೋರ್ಟ್’ನಿಂದ ಹೊರಗಡೆ ಕರೆದುಕೊಂಡು ಬರುವ ವೇಳೆ ಆವರಣದಲ್ಲಿ ನೆರೆದಿದ್ದ ಸಾರ್ವಜನಿಕರ ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಚಪ್ಪಲಿ ಹಾಗೂ ಶೂಗಳನ್ನು ಎಸೆದು ಕಿಡಿ ಕಾರಿದರು.
ಹುಬ್ಬಳ್ಳಿಯ ಕೊಟಗುಣಸಿಯಲ್ಲಿರುವ ಕೆಎಲ್’ಇ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್’ನಲ್ಲಿ ಪುಲ್ವಾಮಾ ದಾಳಿಯ ಕರಾಳ ದಿನಾಚರಣೆ ಸಂದರ್ಭದಲ್ಲೂ ಕಾಶ್ಮೀರಿ ಸಂಭ್ರಮಾಚರಣೆ ಮಾಡಿದ್ದರು. ಈ ವೇಳೆ ಪಾಕಿಸ್ಥಾನ ಜಿಂದಾಬಾದ್, ಕಾಶ್ಮೀರಿ ಆಜಾದಿ ಕರೆಂಗೆ ಎಂಬ ಘೋಷಣೆಗಳನ್ನು ಕೂಗುತ್ತ ಅದನ್ನು ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹಾಕಿಕೊಂಡಿದ್ದರು. ಈ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ದೂರು ದಾಖಲಿಸಿದ್ದರು.
Get in Touch With Us info@kalpa.news Whatsapp: 9481252093
Discussion about this post