ಕಲ್ಪ ಮೀಡಿಯಾ ಹೌಸ್
ಹುಬ್ಬಳ್ಳಿ: ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಮಗಳ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ಡಾ. ರಾಜಕುಮಾರ್ ಅಭಿನಯದ ಎರಡು ಕನಸು ಚಿತ್ರದ ‘ಎಂದೆಂದೂ ನಿನ್ನನು ಮರೆತು ಬದುಕಿರಲಾರೆ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬುಧವಾರ ರಾತ್ತಿ ವಾಣಿಜ್ಯನಗರಿಯಲ್ಲಿ ನಡೆದ ಪುತ್ರಿ ಅರ್ಪಿತಾ ಹಾಗೂ ಹೃಷಿಕೇಶ್ ಅವರ ಆರತಕ್ಷತೆ ಕಾರ್ಯಕ್ರಮದಲ್ಲಿ ಜೋಶಿ ದಂಪತಿ ವೇದಿಕೆ ಮೇಲೆ ಡ್ಯಾನ್ಸ್ ಮಾಡಿ ಮನರಂಜಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ಪ್ರಹ್ಲಾದ್ ಜೋಶಿ ಮಗಳ ಮದುವೆ ಸಮಾರಂಭ:
ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಚಿವ ಆರ್. ಅಶೋಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post