ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ವಿಜಿಲೆನ್ಸ್ ಜಾಗೃತಿ ಸಪ್ತಾಹದ ಜನಸಂಪರ್ಕ ಉಪಕ್ರಮಗಳ ಭಾಗವಾಗಿ, ನೈಋತ್ಯ ರೈಲ್ವೆ #SouthWesternRailway ಆಯೋಜಿಸಿದ್ದ ಅಂತರಶಾಲಾ ಸ್ಪರ್ಧೆಗಳ ಸರಣಿ ಯಶಸ್ವಿಯಾಗಿ ನಡೆಯಿತು.
ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ನೈತಿಕತೆ ಮತ್ತು ಪಾರದರ್ಶಕತೆಯಂತಹ ಮೂಲ ಮೌಲ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಅಂತರಶಾಲಾ ಸ್ಪರ್ಧೆಗಳ #interschoolcompetitions ಸರಣಿಯನ್ನು ಹುಬ್ಬಳ್ಳಿ ರೈಲ್ವೆ ಆಫೀಸರ್ಸ್ ಕ್ಲಬ್’ನಲ್ಲಿ ಆಯೋಜಿಸಲಾಗಿತ್ತು.
ವಿವಿಧ ಶಾಲೆಗಳ ಒಟ್ಟು 102 ವಿದ್ಯಾರ್ಥಿಗಳು ಉತ್ಸಾಹಭರಿತವಾಗಿ ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಭಾಷಣ ಸ್ಪರ್ಧೆಯಲ್ಲಿ 52 ವಿದ್ಯಾರ್ಥಿಗಳು ತಮ್ಮ ಅಭಿವ್ಯಕ್ತಿ ಕೌಶಲ್ಯವನ್ನು ತೋರಿದರು.

ಈ ಕಾರ್ಯಕ್ರಮಗಳು ಯುವ ಮನಸ್ಸುಗಳಿಗೆ ನೈತಿಕ ನಡವಳಿಕೆಯ ಮಹತ್ವ ಮತ್ತು ಭ್ರಷ್ಟಾಚಾರಮುಕ್ತ ಸಮಾಜ ನಿರ್ಮಾಣದ ಸಾಮೂಹಿಕ ಜವಾಬ್ದಾರಿಯ ಅರಿವು ಮೂಡಿಸಿದ್ದು ವಿಶೇಷವಾಗಿತ್ತು.
ನೈಋತ್ಯ ರೈಲ್ವೆಯ ಹಿರಿಯ ಉಪ ಪ್ರಧಾನ ವ್ಯವಸ್ಥಾಪಕರು ಮತ್ತು ಮುಖ್ಯ ಜಾಗೃತಿ ಅಧಿಕಾರಿ ಎ. ಅಣ್ಣಾದುರೈ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಪ್ರದಾನ ಮಾಡಿದರು.
ಜಾಗೃತಿ ಇಲಾಖೆಯ ಹಿರಿಯ ಅಧಿಕಾರಿಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿ, ಜೀವನದ ಎಲ್ಲಾ ಹಂತಗಳಲ್ಲಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯನ್ನು ಪಾಲಿಸುವಂತೆ ಅವರನ್ನು ಪ್ರೋತ್ಸಾಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post