ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಚುನಾವಣೆ ವರ್ಷ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಜನ ಸಂಕಲ್ಪ ಯಾತ್ರೆಯನ್ನು ತೀವ್ರಗೊಳಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇದರ ಜೊತೆಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದರು.
ಜಾಯಿನ್ ಪಿಎಫ್ಐ ವಿಚಾರ: ಪೊಲೀಸರು ಕ್ರಮ
ಶಿರಾಳಕೊಪ್ಪದಲ್ಲಿ ಗೋಡೆಗಳ ಮೇಲೆ ಜಾಯಿನ್ ಪಿಎಫ್ಐ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ಅದರ ಬಗ್ಗೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















