ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಮುಂಬರುವ 2026 ರ ವರ್ಷದಲ್ಲಿ ರಾಜ್ಯದಲ್ಲಿ ಎರಡು ನೂತನ ರೈಲು ಮಾರ್ಗ ಆರಂಭವಾಗಿ, ರೈಲು ಸಂಚಾರ ನಡೆಸುವುದು ಬಹುತೇಕ ಖಚಿತವಾಗಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ #Southwestern Railway ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, #Minister Prahlad Joshi 2026ರಲ್ಲಿ ಬಹುತೇಕ ತುಮಕೂರು-ಚಿತ್ರದುರ್ಗ ಹಾಗೂ ಬಾಗಲಕೋಟೆ-ಕುಡಚಿ ನೂತನ ರೈಲು ಮಾರ್ಗ #New Railway Line ಆರಂಭವಾಗಿ, ರೈಲು ಸಂಚಾರ ನಡೆಸಲಿದೆ ಎಂದಿದ್ದರೆ.
ತುಮಕೂರು – ಚಿತ್ರದುರ್ಗ ಮಾರ್ಗದ 28 ಕಿಮೀ ಕಾಮಗಾರಿ ಮಾತ್ರ ಬಾಕಿ ಇದ್ದು, 2026ರ ಫೆಬ್ರವರಿ ಒಳಗೆ ಕಾಮಗಾರಿ ಮುಗಿಯುವ ಸಾಧ್ಯತೆಯಿದೆ. ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದ ನಂತರ ಧಾರವಾಡ-ಬೆಂಗಳೂರು ಪ್ರಯಾಣದ ಅವಧಿ ಒಂದು ಗಂಟೆ ಕಡಿಮೆಯಾಗಲಿದೆ ಎಂದು ತಿಳಿಸಿದರು.
ಇನ್ನು, ಬಾಗಲಕೋಟೆ – ಕುಡಚಿ ರೈಲು ಮಾರ್ಗದ ನಡುವಿನ ಲೋಕಾಪುರ – ದಾದನಟ್ಟಿ ನಡುವೆ 6.6 ಕಿಮೀ ರೈಲು ಮಾರ್ಗದ ಕಾಮಗಾರಿ ಮಾತ್ರ ಬಾಕಿಯಿದ್ದು, ಇದು 2026ರ ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ ಎಂದರು.
ಇದೇ ವೇಳೆ, ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಹುಬ್ಬಳ್ಳಿ – ಅಂಕೋಲಾ ರೈಲ್ವೆ ಯೋಜನೆಗೆ ಅಗತ್ಯವಾಗಿರುವ ಸಲಹೆಯನ್ನು ಅರಣ್ಯ, ಪರಿಸರ ಹಾಗೂ ವನ್ಯಜೀವಿ ಮಂಡಳಿಯಿAದ ಪಡೆಯಲಾಗಿದೆ ಎಂದು ತಿಳಿಸಿದರು.
ಈಗಾಗಲೇ 17,141 ಕೋಟಿ ವೆಚ್ಚದ ಹೊಸ ಡಿಪಿಆರ್ ಕೂಡಾ ಸಲ್ಲಿಸಲಾಗಿದೆ. ಕ್ಯಾಬಿನೆಟ್ ಒಪ್ಪಿಗೆ ಒಂದೇ ಬಾಕಿ ಇದ್ದು, ಒಪ್ಪಿಗೆ ದೊರೆತ ತಕ್ಷಣವೇ ಯೋಜನೆ ಕಾಮಗಾರಿ ಆರಂಭಿಸಲಾಗುವುದು. ಈ ರೈಲ್ವೆ ಯೋಜನೆ ಜಾರಿಯಾದ ಮೇಲೆ ಅಂಕೋಲಾ ಬಳಿ ಬೇಲೆಕೇರಿ ಸೇರಿ ಎರಡು ಕಡೆ ಬಂದರು ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ರೈಲ್ವೆ, ರಸ್ತೆ ಹಾಗೂ ವಾಯು ಮಾರ್ಗಕ್ಕಿಂತ ಬಂದರಿನಿAದ ವ್ಯಾಪಾರ, ವಹಿವಾಟು ಹೆಚ್ಚಾಗಲಿದೆ. ಉತ್ತರ ಕರ್ನಾಟಕ ಭಾಗದ ಕೈಗಾರಿಕಾ ಬೆಳವಣಿಗೆಗೆ ಇದು ಅನುಕೂಲವಾಗಲಿದೆ. ಅಲ್ಲದೇ ಉತ್ತರ ಕರ್ನಾಟಕದ ಅಭಿವೃದ್ಧಿ ಬಾಗಿಲು ತೆರೆಯಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
ಇದೇ ವೇಳೆ, 2025ರಲ್ಲಿ ನೈಋತ್ಯ ರೈಲ್ವೆಯ ಹೊಸ ಮಾರ್ಗ ನಿರ್ಮಾಣ, ರೈಲು ದ್ವಿಪಥಿಕರಣ ಹಾಗೂ ರಸ್ತೆ ಮೇಲ್ಸೇತುವೆ ಮತ್ತು ರಸ್ತೆ ಕೆಳಸೇತುವೆ ಕಾಮಗಾರಿಗಳ ಸಾಧನೆಗಳನ್ನು ಪರಿಶೀಲಿಸಿದರು. ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿ, ಯಾವುದೇ ಅಡೆತಡೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರದಿಂದ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.
ಪ್ರಮುಖವಾಗಿ, ಅಳನಾವರ (17.2 ಕೋಟಿ), ಬಾದಾಮಿ (15.1 ಕೋಟಿ), ಕೊಪ್ಪಳ (21.14 ಕೋಟಿ) ಮತ್ತು ಬಂಟ್ವಾಳ (26.18 ಕೋಟಿ) ರೈಲು ನಿಲ್ದಾಣಗಳಲ್ಲಿ ಅಮೃತ ಭಾರತ ಸ್ಟೇಷನ್ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಪ್ರಗತಿಯನ್ನು ಅವರು ಪರಿಶೀಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post