ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ವಿವಾದ ಸೃಷ್ಠಿಸಿರುವ ವೀಡಿಯೋದಲ್ಲಿರುವುದು ಪ್ರಜ್ವಲ್ ರೇವಣ್ಣ #Prajwal Revanna ಎನ್ನುವುದಕ್ಕೆ ಪುರಾವೆಯೇನು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ #H D Kumaraswamy ಪ್ರಶ್ನಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವೀಡಿಯೋದಲ್ಲಿ ಪ್ರಜ್ವಲ್ ಮುಖ ಕಾಣಿಸುತ್ತಿದೆಯೇ? ಅದರಲ್ಲಿ ಇರುವುದು ಪ್ರಜ್ವಲ್ ರೇವಣ್ಣ ಎನ್ನುವುದಕ್ಕೆ ಪುರಾವೆ ಏನು? ಆದರೂ ನೈತಿಕತೆಯ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ #Amith Shah ಅವರು ಪ್ರಕರಣದ ತನಿಖೆಗೆ ಬಿಜೆಪಿ ಒಲವು ತೋರಿದ್ದಾರೆ. ರಾಜ್ಯ ಸರ್ಕಾರ ಪ್ರಕರಣದ ತನಿಖೆ ನಡೆಸಬೇಕು ಎಂದು ಅಮಿತ್ ಶಾ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಈ ವಿಷಯ ತಿಳಿಸಿದ್ದಾರೆ.
Also read: ಕಾಟಚಾರಕ್ಕೆ ಎಂಪಿ ಆದರೆ ಸಾಲದು, ಕೆಲಸ ಮಾಡಬೇಕು: ಹ್ಯಾಟ್ರಿಕ್ ಹೀರೋ ಶಿವಣ್ಣ
ಪ್ರಕರಣದ ಹಿಂದೆ ಯಾರಿದ್ದಾರೆ? ಕುಮಾರಸ್ವಾಮಿ ಹೇಳಿದ್ಧೇನು?
ಇನ್ನು, ಪ್ರಜ್ವಲ್ ಅಶ್ಲೀಲ ವೀಡಿಯೋ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇದ್ದಾರೆ. ಹೀಗಾಗಿ, ಅವರನ್ನು ವಜಾಗೊಳಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಕರಣದ ತನಿಖೆಗೆ ಬಿಜೆಪಿ ಒಲವು ತೋರಿದ್ದಾರೆ. ರಾಜ್ಯ ಸರ್ಕಾರ ಪ್ರಕರಣದ ತನಿಖೆ ನಡೆಸಬೇಕು ಎಂದು ಅಮಿತ್ ಶಾ ಹೇಳಿಕೆ ನೀಡಿದ ಬೆನ್ನಲ್ಲೇ ಕುಮಾರಸ್ವಾಮಿ ಈ ವಿಷಯ ತಿಳಿಸಿದ್ದಾರೆ.
ಇದು ತುಂಬಾ ಗಂಭೀರವಾಗಿದೆ, ನಾವು ಅದನ್ನು ಸಹಿಸುವುದಿಲ್ಲ. ಅಧಿಕಾರದಲ್ಲಿದ್ದರೂ ಸರ್ಕಾರ ಇನ್ನೂ ಏಕೆ ಕ್ರಮಕೈಗೊಂಡಿಲ್ಲ ಎಂದು ನಾವು ಕಾಂಗ್ರೆಸ್’ಗೆ ಕೇಳಲು ಬಯಸುತ್ತೇವೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ಕೇಳಬೇಕು ಎಂದು ಶಾ ಹೇಳಿದರು ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post