ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಫೆಬ್ರವರಿ 20, 21ರಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ #JobFair ಆಯೋಜಿಸಲಾಗಿದೆ ಎಂದು ಮೂಡಬಿದರೆ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ತಿಳಿಸಿದರು.
ಪಟ್ಟಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #BSYediyurappa ಜನ್ಮದಿನದ ಪ್ರಯುಕ್ತ ಈ ಉದ್ಯೋಗ ಮೇಳವನ್ನು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಆಶ್ರಯದಲ್ಲಿ ಆಯೋಜಿಸಲಾಗಿದೆ ಎಂದರು.
ಈ ಉದ್ಯೋಗ ಮೇಳದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ನೀಡಲು ಸುಮಾರು 83 ಕಂಪನಿಗಳು ಬರುತ್ತಿವೆ. ವಿದ್ಯಾವಂತ ಯುವಕ-ಯುವತಿಯರಿಗೂ ಹಾಗೂ ಅನಕ್ಷರಸ್ಥರಿಗೂ ಉದ್ಯೋಗವಕಾಶ ನೀಡುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗಿದೆ. ಈ ಅವಕಾಶವನ್ನು ಜಿಲ್ಲೆಯ ಹಾಗೂ ತಾಲೂಕಿನ ಯುವಕ ಯುವತಿಯರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ರಿಯಾಶೀಲ ಸಂಸದರಾದ ಬಿ.ವೈ. ರಾಘವೇಂದ್ರ, ಶಾಸಕರಾದ ಬಿ.ವೈ. ವಿಜಯೇಂದ್ರ ಸಹಕಾರದಿಂದ ಹಾಗೂ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ಮಾರ್ಗದರ್ಶನದಲ್ಲಿ ಉದ್ಯೋಗ ಮೇಳ ನಡೆಯುತ್ತಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಸಾವಿರಾರು ಯುವಕ-ಯುವತಿಯರು ಅರ್ಜಿ ಹಾಕಿ ಹೆಸರು ನೋಂದಾಯಿಸಿದ್ದಾರೆ. ಹೆಸರು ನೋದಾಯಿಸದವರು ಕೂಡ ಉದ್ಯೋಗ ಮೇಳದಲ್ಲಿ ನಡೆಯುವ ಸ್ಥಳದಲ್ಲಿ ಹೆಸರು ನೋಂದಾಯಿಸಿ ಪಾಲ್ಗೊಳ್ಳಬಹುದಾಗಿದೆ. ನಿರುದ್ಯೋಗ ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಉದ್ಯೋಗ ಮೇಳ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕುಮದ್ಚತಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಎಂ. ವೀರೇಂದ್ರ, ಕುಮದ್ವತಿ ಸಿದ್ಧ ಉಡುಪು ತರಬೇತಿ ಕೇಂದ್ರದ ಪ್ರಾಂಶುಪಾಲ ಕೆ.ಎಸ್. ವಿದ್ಯಾಶಂಕರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
