No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎಚ್.ವಿ.ನಂಜುಂಡಯ್ಯ ಪಾರಂಪರಿಕ ಕಟ್ಟಡ ಜೀರ್ಣೋದ್ಧಾರ: ಜರ್ಮನ್ ಕಾನ್ಸುಲೇಟ್ ಅಧಿಕಾರಿಗಳ ಮೆಚ್ಚುಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 16, 2021
in Small Bytes, ಬೆಂಗಳೂರು ನಗರ
0
ಎಚ್.ವಿ.ನಂಜುಂಡಯ್ಯ ಪಾರಂಪರಿಕ ಕಟ್ಟಡ ಜೀರ್ಣೋದ್ಧಾರ: ಜರ್ಮನ್ ಕಾನ್ಸುಲೇಟ್ ಅಧಿಕಾರಿಗಳ ಮೆಚ್ಚುಗೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹಾಗೂ ಮೈಸೂರು ಸಂಸ್ಥಾನದಲ್ಲಿ ಹಂಗಾಮಿ ದಿವಾನರಾಗಿದ್ದ ಎಚ್.ವಿ.ನಂಜುಂಡಯ್ಯ ಅವರು ವಾಸವಿದ್ದ ಹಾಗೂ ತದ ನಂತರ ಮಲ್ಲೇಶ್ವರದ ಸರಕಾರಿ ಬಾಲಕಿಯರ ಪ್ರೌಢಶಾಲೆಗೆ ದಾನ ಮಾಡಿದ್ದ ಭವ್ಯ ಭಂಗಲೆಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಒತ್ತಾಸೆ ಮೇರೆಗೆ ಜೀರ್ಣೋದ್ಧಾರ ಮಾಡಲಾಗುತ್ತಿದ್ದು, ಡಿಸಿಎಂ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿಯನ್ನು ಪರಿಶೀಲನೆ ನಡೆಸಿದರು.

ನಗರದಲ್ಲಿರುವ ಜರ್ಮನ್ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗಳು ಡಿಸಿಎಂ ಜತೆ ಈ ಭಂಗಲೆಗೆ ಭೇಟಿ ನೀಡಿ ಅಲ್ಲಿನ ನಿರ್ಮಾಣ ಶೈಲಿಯನ್ನು ಕಂಡು ಚಕಿತರಾದರು. ನಗರದ ಪ್ರಮುಖ ಪಾರಂಪರಿಕ ಕಟ್ಟಡವಾಗಿರುವ ಈ ಭಂಗಲೆಯಲ್ಲಿ ನಂಜುಂಡಯ್ಯ ಅವರು ವಾಸವಿದ್ದರು. 1915ರಲ್ಲಿ ಕಟ್ಟಡವನ್ನು ನಿರ್ಮಾಣ ಮಾಡಲಾಗಿತ್ತು. ಇದು ಎಚ್‌ವಿಎನ್ ಭಂಗಲೆ ಎಂದೇ ಪ್ರಖ್ಯಾತಿಯಾಗಿದೆ. ಕಟ್ಟಡ ಹಳತಾದಂತೆಲ್ಲ ಅದಕ್ಕೆ ಅಲ್ಲಲ್ಲಿ ಧಕ್ಕೆ ಉಂಟಾಗಿತ್ತು. ಇದನ್ನು ಗಮನಿಸಿದ್ದ ಡಿಸಿಎಂ ಅವರು ಬಿಬಿಎಂಪಿ ನೆರವಿನೊಂದಿಗೆ ಜೀರ್ಣೋದ್ಧಾರ ಕಾರ್ಯ ಕೈಗೊಂಡಿದ್ದಾರೆ.

2 ಕೋಟಿ ರೂ. ವೆಚ್ಚ:

ಇಡೀ ನಗರಕ್ಕೆ ಹೆಮ್ಮೆ ತರುವ ಕಟ್ಟಡ ಇದಾಗಿದ್ದು, ಮಲ್ಲೇಶ್ವರದಲ್ಲಿ ಇರುವುದು ನಮ್ಮ ಭಾಗ್ಯವೇ ಸರಿ. ಇದನ್ನ ಉಳಿಸಿ ಸಂರಕ್ಷಣೆ ಮಾಡುವ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗಿದೆ. ಎಸ್ತೆಟಿಕ್ ಆರ್ಕಿಟೆಕ್ಟ್ ಸಂಸ್ಥೆಯವರು ಜೀರ್ಣೋದ್ಧಾರ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ. ಬಿಬಿಎಂಪಿ 2 ಕೋಟಿ ರೂ. ಅನುದಾನ ನೀಡಿದ್ದು, ಕೆಲಸ ಭರದಿಂದ ಸಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ಹಳೆಯ ಅಥವಾ ಪಾರಂಪರಿಕ ಕಟ್ಟಡಗಳು ಎಂದರೆ ಜರ್ಮನ್ನರಿಗೆ ಅಚ್ಚುಮೆಚ್ಚು. ಅದಕ್ಕಾಗಿ ಇವತ್ತು ಬೆಂಗಳೂರಿನ ಜರ್ಮನ್ ಕಾನ್ಸುಲೇಟ್ ಜನರಲ್ ಆಗಿರುವ ಆಕ್ಚಿಮ್ ಬರ್ಕಾರ್ಟ್ ಹಾಗೂ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣರಾಜೇಂದ್ರ ಒಡೆಯರ್ ಸ್ಥಳಕ್ಕೆ ಆಗಮಿಸಿ ಭಂಗಲೆಯಲ್ಲಿ ನಡೆಯುತ್ತಿರುವ ಕೆಲಸವನ್ನು ವೀಕ್ಷಣೆ ಮಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ, ಇಡೀ ಬೆಂಗಳೂರಿನ ಕೀರ್ತಿಯನ್ನು ಹೆಚ್ಚಿಸುವ ಕಾರ್ಯ ಇದಾಗಿದೆ ಎಂದು ಡಿಸಿಎಂ ಹೇಳಿದರು.

ಚಕಿತರಾದ ಜರ್ಮನ್ನರು:

ಈ ಭಂಗಲೆಯಲ್ಲಿ ಆ ಕಾಲಕ್ಕೆ ಬೃಹತ್ ಗಾತ್ರದ ಸೋನಾ ಬಾತ್ ವ್ಯವಸ್ಥೆ ನಿರ್ಮಾಣವಾಗಿದೆ. ಇದನ್ನು ಕಂಡು ಜರ್ಮನ್ ರಾಜತಾಂತ್ರಿಕರು ಚಕಿತರಾದರು. ಕಟ್ಟಡದ ವಿನ್ಯಾಸ, ಗಾಳಿ-ಬೆಳಕಿನ ವ್ಯವಸ್ಥೆ, ಕಲ್ಲು ಮತ್ತು ಮರದ ಕೆತ್ತನೆ ಇತ್ಯಾದಿಗಳನ್ನು ಕಂಡು ಜರ್ಮನ್ ಕಾನ್ಸುಲೇಟ್ ಜನರಲ್ ಆಗಿರುವ ಆಕ್ಚಿಮ್ ಬರ್ಕಾರ್ಟ್ ಅವರು ಚಕಿತರಾದರು.

ಯದುವೀರ್ ಕೃಷ್ಣರಾಜೇಂದ್ರ ಒಡೆಯರ್ ಅವರು ಕೂಡ, ಪಾರಂಪರಿಕ ಕಟ್ಟಡವನ್ನು ಜೀರ್ಣೋದ್ಧಾರ ಮಾಡಿಸುತ್ತಿರುವ ಡಿಸಿಎಂ ಆಸಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೂ ಇಂಥ ಅಪರೂಪದ ಕಟ್ಟಡಗಳನ್ನು ಉಳಿಸಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಈ ವರ್ಷಾಂತ್ಯಕ್ಕೆ ಕಾಮಗಾರಿ ಮುಗಿಯುತ್ತದೆ. ಈ ಕಟ್ಟಡವನ್ನು ಪುನರುದ್ಧಾರ ಮಾಡುತ್ತಿರುವುದು ನಮಗೆ ಹೆಮ್ಮೆಯ ಸಂಗತಿ. ಕಾಮಗಾರಿ ಮುಗಿದ ಮೇಲೆ ಇಡೀ ಮಲ್ಲೇಶ್ವರವನ್ನು ಪ್ರತಿಬಿಂಬಿಸುವ ಮ್ಯೂಸಿಯಂ ರೀತಿಯಲ್ಲಿ ಇದನ್ನು ಅಭಿವೃದ್ಧಿ ಮಾಡಲಾಗುವುದು. ಆ ಮೂಲಕ ನಂಜುಂಡಯ್ಯ ಅವರ ಹೆಸರನ್ನು ಚಿರಸ್ಥಾಯಿಗೊಳಿಸಲಾಗುವುದು ಎಂದರು.

ಕಳೆದ ವರ್ಷದ ನವೆಂಬರ್‌ನಲ್ಲಿ ಜೀರ್ಣೋದ್ಧಾರ ಕೆಲಸ ಶುರುವಾಗಿದೆ. ಕೆಲಸ ಆರಂಭಿಸುವ ಮುನ್ನ ವ್ಯಾಪಕ ಅಧ್ಯಯನ-ಸಂಶೋಧನೆ ಮಾಡಲಾಗಿದೆ. ಎಲ್ಲಿಯೂ ಮೂಲ ಸ್ವರೂಪಕ್ಕೆ ಧಕ್ಕೆ ಇಲ್ಲದೆ ಇಡೀ ಕಟ್ಟಡವನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ. ಅಲ್ಲಲ್ಲಿ ಶಿಥಿಲಗೊಂಡಿರುವ ಕಂಬಗಳು, ಮರದ ಕೆತ್ತನೆ. ಹಲಗೆಗಳು ಇತ್ಯಾದಿಗಳನ್ನು ಅತ್ಯಂತ ಜತನದಿಂದ ರಿಪೇರಿ ಮಾಡುವ ಅಥವಾ ಅದೇ ಶೈಲಿಯಲ್ಲಿ ಬದಲಿಸುವ ಕೆಲಸ ನಡೆಯುತ್ತಿದೆ. ಈ ವಿಷಯದಲ್ಲಿ ತಜ್ಞರಾಗಿರುವ ಅನೇಕರು ಕೆಲಸ ಮಾಡುತ್ತಿದ್ದಾರೆಂದು ಡಿಸಿಎಂ ಮಾಹಿತಿ ನೀಡಿದರು.

ಈ ಸಂಸದರ್ಭದಲ್ಲಿ ಎಚ್.ವಿ. ನಂಜುಂಡಯ್ಯ ಅವರ ಕುಟುಂಬದವರು ಇದ್ದು, ಜೀರ್ಣೋದ್ಧಾರ ಕೆಲಸಗಳನ್ನು ವೀಕ್ಷಣೆ ಮಾಡಿದರು. ಜರ್ಮನ್ ಕಾನ್ಸುಲೇಟ್‌ನ ಉಪ ಕಾನ್ಸುಲ್ ಜನರಲ್ ಕಾರ್ಲ್ ಫಿಲಿಪ್, ಜರ್ಮನ್ ಕಾನ್ಸುಲೇಟ್‌ನ ಸಾಂಸ್ಕೃತಿಕ ವಿಭಾಗದ ಅಧಿಕಾರಿ ಆನ್ ಕ್ರಿಸ್ಟಿನ್ ಸ್ಮಿತ್, ಸಾಂಸ್ಕೃತಿಕ ವಿಭಾಗದ ಕಾರ್ಯದರ್ಶಿ ಸುಜಾತಾ ಸುಂದರಂ, ಬಿಬಿಎಂಪಿ ಕಾರ್ಯ ನಿರ್ವಾಹಕ ಎಂಜಿನಿಯರ್ ಪಾಪ ರೆಡ್ಡಿ ಹಾಗೂ ಎಸ್ತೆಟಿಕ್ ಆರ್ಕಿಟೆಕ್ಟ್ ಸಂಸ್ಥೆಯ ಅಧಿಕಾರಿಗಳು ಕೂಡ ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreDCM Ashwath NarayanGerman Consulate GeneralHV Nanjundaiah Heritage BuildingKannada News WebsiteLatest News KannadaLocal NewsS V NanjundaiahYaduveer Krishnadatta Chamaraja Wodeyarಬೆಂಗಳೂರು
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿತ್ರದುರ್ಗ ರೇಷ್ಮೆ ಇಲಾಖೆ ಪ್ರದರ್ಶಕ ಅಧಿಕಾರಿ ಎಸಿಬಿ ಬಲೆಗೆ

Next Post

ಜನರಿಕ್ ಔಷಧ: ಜನತೆಗೊಂದು ವರದಾನ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜನರಿಕ್ ಔಷಧಿಗಳು ಕಳಪೆಯಲ್ಲ: ಬೆಲೆ ಕಡಿಮೆ. ಆದರೆ, ಗುಣಮಟ್ಟ ಮಾತ್ರ ಅತ್ಯುತ್ತಮ

ಜನರಿಕ್ ಔಷಧ: ಜನತೆಗೊಂದು ವರದಾನ!

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL