ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ YSJaganmohanReddy ಸಹೋದರಿ ವೈ.ಎಸ್. ಶರ್ಮಿಳಾ ಅವರನ್ನು ಪೊಲೀಸರು ಬಂಧಿಸಿದ್ದ, ಅವರನ್ನು 14 ದಿನ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.
ಶರ್ಮಿಲಾ ಅವರು ತಮ್ಮ ನಿವಾಸದ ಹೊರಗೆ ವಿಚಾರವೊಂದಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದ ವೇಳೆ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶರ್ಮಿಳಾ ಅವರನ್ನು ಹೈದರಾಬಾದ್ ಪೊಲೀಸರು ಅವರನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಿದ್ದು, 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ ಎಂದು ವರದಿಯಾಗಿದೆ.
Also read: ಪ್ರತಿಷ್ಠೆಯಾಗಿ ಸ್ವೀಕರಿಸಿ ಭದ್ರಾವತಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇನೆ: ಯಡಿಯೂರಪ್ಪ ಭರವಸೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















