ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಅಪ್ರಾಪ್ತ ಬಾಲಕಿಯ ಮೇಲೆ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒರ್ವನನ್ನು ಬಂಧಿಸಲಾಗಿದೆ. ಎಂದು ಪೊಲೀಸ್ ಅಧಿಕಾರಿ ಜೋಯಲ್ ಡೇವಿಸ್ ತಿಳಿಸಿದ್ದಾರೆ.
ಈ ಬಗ್ಗೆ ಅವರು ಮಾಹಿತಿ ನೀಡಿದ್ದು, ಸಂತ್ರಸ್ತೆ ಒರ್ವನ ಹೆಸರನ್ನು ಮಾತ್ರ ಬಹಿರಂಗಪಡಿಸಿದ್ದು, ಇತರ ಆರೋಪಿಗಳ ಬಗ್ಗೆ ಯಾವುದೇ ವಿಷಯ ಬಹಿರಂಗಪಡಿಸಿಲ್ಲ ಹಾಗೂ ಪ್ರಸ್ತುತ ಆಕೆ ಯಾರನ್ನು ಗುರುತಿಸುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ.
ಮೇ 28ರಂದು ಜುಬಿಲಿ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯ ತಂದೆ ದೂರು ನೀಡಿದ ನಂತರ ವಿಷಯ ತಡವಾಗಿ ಬೆಳಕಿದೆ ಬಂದಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಮತ್ತು 323ರ ಅಡಿಯಲ್ಲಿ ಪ್ರರಕಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಐವರು ಆರೋಪಿಗಳಲ್ಲಿ ಮೂವರು ಅಪ್ರಾಪ್ತರು ಎನ್ನಲಾಗಿದೆ.
Also read: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂ.7ರಂದು ವನಮಹೋತ್ಸವ ಸಮಾರಂಭ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post