ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಹೈದರಾಬಾದ್‌ನ ಖಾಸಗಿ ಶಾಲೆಯ ಪ್ರಾಂಶುಪಾಲರ ಕಾರು ಚಾಲಕ 4 ವರ್ಷದ ಬಾಲಕಿ ಮೇಲೆ ಎರಡು ತಿಂಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಶಾಲೆಗೆ ನೀಡಿರುವ ಸರ್ಕಾರಿ ಮಾನ್ಯತೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ತೆಲಂಗಾಣದ ಶಿಕ್ಷಣ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಆದೇಶಿಸಿದ್ದಾರೆ.
ಆದರೆ ಪ್ರಸ್ತುತ ಈ ಶಾಲೆಯಲ್ಲಿ ಒಟ್ಟು 700 ವಿದ್ಯಾರ್ಥಿಗಳು ಓದುತ್ತಿದ್ದು, ಮಧ್ಯ ವಾರ್ಷಿಕ ಸಂದರ್ಭದಲ್ಲಿ ಸೀಟುಗಳನ್ನು ಹುಡುಕುವುದು ದೊಡ್ಡ ಸವಾಲಾಗಿದೆ ಇದರೊಂದಿಗೆ ಶಿಕ್ಷಣ ಕಾರ್ಯದರ್ಶಿ, ಶಾಲಾ ಶಿಕ್ಷಣ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆಗೆ ವ್ಯವಹರಿಸುವ ಹಿರಿಯ ಅಧಿಕಾರಿಗಳನ್ನ ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಇಂತಹ ಘಟನೆಗಳು ಮರುಕಳಿಸದಂತೆ ಯಾವೆಲ್ಲಾ ಭದ್ರತಾ ಕ್ರಮಗಳನ್ನು ಕೈಗೊಳ್ಳಬಹುದು ಅನ್ನೋ ಬಗ್ಗೆ ಒಂದು ವಾರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಜೊತೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಸಚಿವ ರಾಮಾರಾವ್ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















