ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ಅಲ್ಲು ಅರ್ಜುನ್ #AlluArjun ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಶುಕ್ರವಾರ ಹೈದರಾಬಾದ್ ನಿವಾಸದಿಂದ ಬಂಧಿಸಲ್ಪಟ್ಟ ಟಾಲಿವುಡ್ #Tollywood ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಬಂಧನದ ನಂತರ, ನಟನನ್ನು ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಚಿತ್ರದ ಬಿಡುಗಡೆಯ ವೇಳೆ ಹೈದರಾಬಾದ್ ಥಿಯೇಟರ್’ನಲ್ಲಿ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಕುರಿತು ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ನಟ ನ್ಯಾಯಾಲಯದ ಮೊರೆ ಹೋಗಿದ್ದರು.
Also Read: ಐಕಾನ್ ಸ್ಟಾರ್ ನಟ ಅಲ್ಲು ಅರ್ಜುನ್ ಅರೆಸ್ಟ್ | ಕಾರಣವೇನು?
ಮತ್ತೊಂದೆಡೆ, ಮೃತ ಮಹಿಳೆಯ ಪತಿ ಬಂಧನದ ಬಗ್ಗೆ ತಿಳಿದಿಲ್ಲದ ಕಾರಣ ಪ್ರಕರಣವನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದರು. ನನ್ನ ಪತ್ನಿ ಸಾವನ್ನಪ್ಪಿದ ಕಾಲ್ತುಳಿತಕ್ಕೂ ಅಲ್ಲು ಅರ್ಜುನ್’ಗೂ ಯಾವುದೇ ಸಂಬಂಧವಿಲ್ಲ ಎಂದು ರೇವತಿ ಪತಿ ಭಾಸ್ಕರ್ ಹೇಳಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post