ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಬೊಯ್ನಪಲ್ಲಿ ಮಂಡಲದ ವೆಂಕಟರಾವ್ಪಲ್ಲಿ ಗ್ರಾಮದ ಶಾಲೆಯಲ್ಲಿ ಬಾಲಕನೋರ್ವ ಊಟ ಮಾಡುವಾಗ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
೩ನೇ ತರಗತಿ ಬಾಲಕ ಕೌಶಿಕ್ (9) ಮೃತ ಬಾಲಕನಾಗಿದ್ದು, ಎಂದಿನಂತೆ ಮಧ್ಯಾಹ್ನದ ಊಟಕ್ಕಾಗಿ ತನ್ನ ಸ್ನೇಹಿತರೊಂದಿಗೆ ಸರದಿಯಲ್ಲಿ ನಿಂತಿದ್ದನು. ಈ ವೇಳೆ ಕೌಶಿಕ್ ಇದ್ದಕ್ಕಿದ್ದಂತೆ ಸರತಿ ಸಾಲಿನಲ್ಲಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಶಿಕ್ಷಕರು ವಿದ್ಯಾರ್ಥಿಯನ್ನು ವೈದ್ಯರ ಬಳಿ ಕರೆದೊಯ್ದ ವೇಳೆ ಕೌಶಿಕ್ಗೆ ಹೃಧಯಾಘಾತವಾಗಿರುವುದಾಗಿ ವೈದ್ಯರು ತಿಳಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ.
ಕರೀಂ ನಗರ ಆಸ್ಪತ್ರೆಯ ವೈದ್ಯರು ಪರಿಶೀಲಿಸಿ ಬಾಲಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ.
Also read: ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ: 14 ವಾಹನಗಳು ಬೆಂಕಿಗಾಹುತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post