ಕಲ್ಪ ಮೀಡಿಯಾ ಹೌಸ್ | ಹೈದರಾಬದ್ |
ಜಲ್ಲಿ ತುಂಬಿದ್ದ ಟ್ರಕ್ ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 19 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವಲ್ಲಾ ಬಳಿಯ ಮಿರ್ಜಗುಡದಲ್ಲಿ ನಡೆದಿದೆ.
ಘಟನೆ ನಡೆದಿದ್ದು ಹೇಗೆ?
ಜಲ್ಲಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್’ಟಿಸಿ ಬಸ್’ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ಜಲ್ಲಿಕಲ್ಲು ಸಾಗಿಸುತ್ತಿದ್ದ ಬೃಹತ್ ಟ್ರಕ್ ಬಸ್’ಗೆ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಟ್ರಕ್ ಗುದ್ದಿದ ರಭಸದಿಂದಾಗಿ ಟ್ರಕ್’ನಲ್ಲಿದ್ದ ಜಲ್ಲಿಕಲ್ಲುಗಳು ಬಸ್’ನೊಳಗೆ ಬಿದ್ದಿವೆ. ಜಲ್ಲಿಕಲ್ಲುಗಳಲ್ಲಿ ಕೆಲವು ಪ್ರಯಾಣಿಕರು ಸಿಲುಕಿಕೊಂಡಿದ್ದರು. ಟ್ರಕ್ ಚಾಲಕ ಓವರ್’ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಅಪಘಾತ ಸಂಭವಿಸಿದೆಯೇ ಅಥವಾ ಅವನು ತಪ್ಪು ದಿಕ್ಕಿನಲ್ಲಿ ಚಾಲನೆ ಮಾಡುತ್ತಿದ್ದನೇ ಎಂಬುದು ಇನ್ನೂ ತಿಳಿದುಬರಬೇಕಿದೆ.
ಅಪಘಾತಕ್ಕೀಡಾದ ಬಸ್’ನಲ್ಲಿ 40 ಪ್ರಯಾಣಿಕರಿದ್ದರು. ಡಿಕ್ಕಿಯ ನಂತರ ಟ್ರಕ’ನಲ್ಲಿದ್ದ ಜಲ್ಲಿಕಲ್ಲುಗಳ ಹೊರೆ ಪ್ರಯಾಣಿಕರ ಮೇಲೆ ಬಿದ್ದಿದೆ.
ಬಸ್’ನಿನಿಂದ ಶವಗಳನ್ನು ಮತ್ತು ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















