ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ತೆಲಂಗಾಣದ ನಿಕಟಪೂರ್ವ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ KChandrashekar Rao ಅವರು ತಮ್ಮ ಸ್ವಗೃಹದಲ್ಲಿ ಕಾಲು ಜಾರಿ ಬಿದ್ದು, ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾತ್ರಿ ತಮ್ಮ ಮನೆಯಲ್ಲಿ ಕಾಲುಜಾರಿ ಬಿದ್ದ ಪರಿಣಾಮ ಮೂಳೆ ಮುರಿತಗೊಂಡಿದೆ ಎಂದು ಹೇಳಲಾಗಿದ್ದು, ತತಕ್ಷಣವೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಸೋಮಾಜಿಗುಡದಲ್ಲಿರುವ ಯಶೋಧಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಕೆಸಿಆರ್ ಅನಾರೋಗ್ಯದ ವಿಷಯ ತಿಳಿದ ತಕ್ಷಣ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿದ್ದಾರೆ.
Also read: ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ | ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಪ್ರಕರಣ
ಕೆಸಿಆರ್ ಅವರ ಆರೋಗ್ಯ ಕುರಿತಾಗಿ ಆಸ್ಪತ್ರೆ ಹೆಲ್ತ್ ಬುಲೆಟಿನ್ ಇನ್ನೂ ಬಿಡುಗಡೆ ಆಗಬೇಕಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
ಕೆಸಿಆರ್ 2014 ರಿಂದ 2023ರ ವರೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕೆಸಿಆರ್ ಅವರ ಬಿಆರ್’ಸಿ ಪಕ್ಷ ಸೋತು ಅಧಿಕಾರ ಕಳೆಕೊಂಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







