ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಪುಷ್ಪಾ 2 #Pushpa 2 ಚಿತ್ರದ ಯಶಸ್ಸಿನ ನಡುವೆಯೇ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ #Allu Arjun Arrest ಅವರನ್ನು ಪೊಲೀಸರು ಚೀಕಟಪಲ್ಲಿಯಲ್ಲಿ ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಪುಷ್ಪ 2 ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಹೈದರಾಬಾದ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು.
ಆ ವೇಳೆಯಲ್ಲಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿ, ರೇವತಿ (39) ಎಂಬ ಮಹಿಳೆ ನಿಧನ ಹೊಂದಿದ್ದರು. ಅವರ 9 ವರ್ಷದ ಮಗ ಕಾಲ್ತುಳಿತಕ್ಕೆ ಸಿಕ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಸಹ ಆರೋಪಿಯಾಗಿದ್ದರು.

Also read: ತೀರ್ಥಹಳ್ಳಿ | ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ
ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ.

ಭಾರೀ ನಿರೀಕ್ಷೆ ಹುಟ್ಟಿಸಿದ್ದ ಪುಷ್ಪಾ 2 ಚಿತ್ರ ಅಪಾರವಾದ ಯಶಸ್ಸನ್ನು ಕಂಡಿದೆ. ಅದರ ಬೆನ್ನಲ್ಲೇ ಈ ದುರಂತ ನಡೆದಿರುವುದು, ಅಲ್ಲು ಅರ್ಜುನ್ ಬಂಧನವಾಗಿರುವುದು ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post