ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರರಂಗದವರ ಕುರಿತಾಗಿ ನನಗೆ ಬಹಳ ಸಿಟ್ಟಿದ್ದು, ಕೆಲವರಿಗೆ ನಟ್ ಬೋಲ್ಟ್ ಟೈಟ್ ಮಾಡುವುದು ಹೇಗೆ ಎಂದು ನನಗೆ ತಿಳಿದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ #DKShivakumar ಕಿಡಿ ಕಾರಿದರು.
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Also Read>> ಶಿವಮೊಗ್ಗ | ಏಕಾಏಕಿ ಹೈದರಾಬಾದ್ ವಿಮಾನ ಇಂದು ರದ್ದು | ಪ್ರಯಾಣಿಕರ ಆಕ್ರೋಶ | ಆಗಿದ್ದೇನು?
ನಮ್ಮ ಸಿನಿಮಾ ರಂಗದವರ #FilmIndustry ಬಗ್ಗೆ ನನಗೆ ಬಹಳ ಸಿಟ್ಟಿದೆ. ಕೆಲಸ ಇದ್ದಾಗ ನಮ್ಮ ಬಳಿ ಬರುತ್ತಾರೆ. ನಂತರ ಬಳಸಿ ಬಿಸಾಡುತ್ತಾರೆ. ನಮ್ಮ ಪಕ್ಷದಿಂದ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದೆವು. ಈ ವೇಳೆ ಚಿತ್ರರಂಗದ ಕೆಲವರು ಮಾತ್ರ ಜೊತೆಯಾದರು. ಬಹುತೇಕರು ಬರಲೇ ಇಲ್ಲ. ಈ ರೀತಿ ಮಾಡುವವರ ನಟ್, ಬೋಲ್ಟ್ ಟೈಟ್ ಮಾಡುವುದು ಹೇಗೆಂಬುದು ನನಗೆ ಗೊತ್ತು ಎಂದು ಕಿಡಿ ಕಾರಿದರು.

ಕಷ್ಟದ ಸಂದರ್ಭದಲ್ಲಿ ನಮ್ಮ ಜೊತೆಗಿದ್ದವರ ಕೈ ಹಿಡಿಯಬೇಕಾಗಿದ್ದು ನಮ್ಮ ಜವಾಬ್ದಾರಿ. ಅದಕ್ಕಾಗಿ ನಮ್ಮ ಸರ್ಕಾರ ಬರುತ್ತಿದ್ದಂತೆ ಸಾಧುಕೋಕಿಲಾ #Sadhukokila ಅವರನ್ನು ಅಕಾಡೆಮಿ ಅಧ್ಯಕ್ಷರಾಗಿ ನೇಮಿಸಿದ್ದೇವೆ. ನಮ್ಮ ಜೊತೆಗಿರುವವರಿಗೆ ಸೂಕ್ತ ಗೌರವ ನೀಡುತ್ತೇವೆ ಎಂದರು.
ಸರ್ಕಾರದ ಆಚಾರ, ವಿಚಾರಗಳನ್ನು ಪ್ರಚಾರ ಮಾಡುವುದು ಸಿನಿಮಾ ರಂಗದವರ ಧರ್ಮ. ಇಂತಹ ದೊಡ್ಡ ಕಾರ್ಯಕ್ರಮಕ್ಕೆ ಸಿನಿಮಾ ರಂಗದ ಕೆಲವೇ ಕೆಲ ಜನರು ಬಂದಿದ್ದಾರೆ. ಚಿತ್ರೋತ್ಸವಕ್ಕೆ ಸಿನಿಮಾ ರಂಗದವರೇ ಬಾರದಿದ್ದರೆ ಹೇಗೆ? ಕೆಲ ಜನ ಮಾತ್ರ ವೇದಿಕೆ ಎದುರು ಕುಳಿತಿದ್ದಾರೆ. ಇಂತಹ ಕಾರ್ಯಕ್ರಮಕ್ಕೆ ಸಿನಿಮಾ ರಂಗದ ಎಲ್ಲರೂ ಇರಬೇಕಿತ್ತು. ನಾವು ಎಲ್ಲವನ್ನೂ ಗಮನಿಸುತ್ತೇವೆ ಎಂದು ವಾರ್ನಿಂಗ್ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post