ನವದೆಹಲಿ: ಪಾಕಿಸ್ಥಾನದ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ಸೇನಾ ಪಡೆಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇಂದು ಸಂಜೆ ಕರೆಯಲಾಗಿದ್ದ ಕೇಂದ್ರ ಸರ್ವಪಕ್ಷ ಸಭೆ ಯಶಸ್ವಿಯಾಗಿದೆ.
ಈ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ಸುಷ್ಮಾ ಸ್ವರಾಜ್, ಸರ್ವ ಪಕ್ಷ ಸಭೆಯಲ್ಲಿ ಎಲ್ಲ ಪಕ್ಷಗಳೂ ಅತ್ಯಂತ ಸಕಾರಾತ್ಮಕವಾಗಿ ಮಾತನಾಡಿದ್ದು ಸಂತೋಷ ತಂದಿದೆ. ದೇಶದ ರಕ್ಷಣೆಗಾಗಿ ನಮ್ಮೆಲ್ಲರ ಬೆಂಬಲವಿದೆ ಎಂದಿರುವುದು ಸಂತಸದ ವಿಚಾರ ಎಂದಿದ್ದಾರೆ.
#WATCH EAM Sushma Swaraj after all party meeting: I am happy that all parties in one voice praised the security forces and supported the Govt's anti-terror operations. pic.twitter.com/AOaIhMIDln
— ANI (@ANI) February 26, 2019
ಉಗ್ರವಾದವನ್ನು ಹತ್ತಿಕ್ಕುವಲ್ಲಿ ಹಾಗೂ ದೇಶವನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಮ್ಮ ಬೆಂಬಲವಿರುತ್ತದೆ ಎಂದು ಸರ್ವಪಕ್ಷಗಳ ಮುಖಂಡರು ಭರವಸೆ ನೀಡಿವೆ.
Discussion about this post