ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನನ್ನ ಅಣ್ಣ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂಬ ಆಸೆ ನನಗೆ ಈಗಲೂ ಸಹ ಇದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
Also Read>> ಭಾರತ ವಿಶ್ವಗುರು ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ | ಶಾಸಕ ಚನ್ನಬಸಪ್ಪ ಹೇಳಿದ್ದೇನು?
ಈ ಕುರಿತಂತೆ ಮಾತನಾಡಿದ ಅವರು, ನನ್ನ ಅಣ್ಣ ಸಿಎಂ ಆಗಲಿ ಎಂಬ ಆಸೆ ನನಗೆ ಈಗಲೇ ಇದ್ದು, ಅದಕ್ಕೆ ಕಾಲ ಕೂಡಿಬರಬೇಕು ಅಷ್ಟೇ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ರಾಜ್ಯದಲ್ಲಿ ಈಗ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇದ್ದಾರೆ, ಸ್ಥಾನ ಬೇಕು ಅಂತ ಎಂದು ಚೇರಿನಿಂದ ಎಳೆದು ಕೂರಿಸೋಕೆ ಆಗುತ್ತಾ? ಪಕ್ಷದ ಅಧ್ಯಕ್ಷರು ದೆಹಲಿಗೆ ಹೋಗುತ್ತಾ ಇರುತ್ತಾರೆ. ಹೈಕಮಾಂಡ್ ಜೊತೆ ಸಂಪರ್ಕ ಇಟ್ಟುಕೊಂಡಿರುತ್ತಾರೆ. ಹೈಕಮಾಂಡ್ ಭೇಟಿ ಮಾಡಿ ಬರುವುದು ಪ್ರವೃತ್ತಿ. ಡಿಕೆಶಿ ಮುಂದೆ ಯಾವುದೇ ಅಜೆಂಡ ಇಲ್ಲ. ಬೇರೆ ಯಾವುದೇ ಚಿಂತನೆಗಳೂ ಇಲ್ಲ. ಹಕ್ಕು ಅನ್ನೋ ಪ್ರಶ್ನೆ ಇಲ್ಲ ಎಂದಿದ್ದಾರೆ.
ಶಿವಕುಮಾರ್ ಹೈಕಮಾಂಡ್ ಭೇಟಿ ಯಾವುದು ಹೊಸತಲ್ಲ. ನಿರಂತರವಾಗಿ ಭೇಟಿ ಮಾಡುತ್ತಲೇ ಇರುತ್ತಾರೆ. ಹೈಕಮಾಂಡ್ ಮುಂದೆ ಡಿಮ್ಯಾಂಡ್ ಇಡಲು ಏನಿದೆ ಪಾರ್ಟಿ ಅವರನ್ನು ಡಿಸಿಎಂ ಮಾಡಿದೆಯಲ್ಲ ಇನ್ನೇನು ಬೇಕು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
ಕಲ್ಪ ಮೀಡಿಯಾ ಹೌಸ್ | ಹಾಸನ |
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DKShivakumar ಅವರು ಬಿಜೆಪಿ ಸೇರ್ಪಡೆಗೊಳ್ಳುತ್ತಾರಾ ಎಂಬ ಊಹಾಪೋಹಗಳ ನಡುವೆಯೇ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #BYVijayendra ಅವರು ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
Also Read>> ಭಾರತ ವಿಶ್ವಗುರು ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ | ಶಾಸಕ ಚನ್ನಬಸಪ್ಪ ಹೇಳಿದ್ದೇನು?
ಈ ಕುರಿತಂತೆ ಮಾತನಾಡಿರುವ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ #Congress ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿದೆ ಎಂದು ನಾನು ಹಿಂದೆಯೇ ಹೇಳಿದ್ದೆ. ಅದರಂತೆಯೇ ಈಗ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಮತ್ತೆ ಹಲವು ಬೆಳವಣಿಗೆಗಳ ಮುನ್ಸೂಚನೆಯೂ ಇದೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಇಶಾ ಫೌಂಡೇಶನ್ ಶಿವರಾತ್ರಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿದ್ದರು. ಆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಸಹ ಪಾಲ್ಗೊಂಡಿದ್ದರು ಎಂದಷ್ಟೇ ಹೇಳಿದರು. ಡಿಕೆ ಶಿವಕುಮಾರ್ ಬಿಜೆಪಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನಾಯಕರ ಒಂದು ಬಣ ಪ್ರತ್ಯೇಕ ಸಭೆಗಳನ್ನು ನಡೆಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ಪಕ್ಷ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ಈ ರೀತಿ ಚರ್ಚಿಸುವುದು ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಿದರು. ಪಕ್ಷಕ್ಕೆ ಸಹಾಯ ಮಾಡುವ ಸರಿಯಾದ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post