ಕಲ್ಪ ಮೀಡಿಯಾ ಹೌಸ್
ನವದೆಹಲಿ: ದೇಶದ ಬಹುತೇಕ ರಾಜ್ಯಗಳಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ 8 ವಾರಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಐಸಿಎಂಆರ್ ಸಲಹೆ ನೀಡಿದೆ.
ಐಸಿಎಂಆರ್ ಮುಖ್ಯಸ್ಥ ಬಲರಾಂ ಭಾರ್ಗವ್ ಅವರು ಕೇಂದ್ರ ಸರ್ಕಾರಕ್ಕೆ ಈ ಶಿಫಾರಸ್ಸು ಮಾಡಿದ್ದು, ಈಶಾನ್ಯದ ಕೆಲವು ರಾಜ್ಯಗಳು ಸೇರಿದಂತೆ ದೇಶದ ಬಹಳಷ್ಟು ಕಡೆಗಳಲ್ಲಿ ಸೋಂಕು ಶೇ.10ಕ್ಕಿಂತಲೂ ಹೆಚ್ಚಿಗೆ ಇದೆ. ಹೀಗಾಗಿ, ಇದರ ಚೈನ್ ಲಿಂಕ್ ತುಂಡರಿಸಲೇಬೇಕು. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ 8 ವಾರಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಎಲ್ಲಿ ಪಾಸಿಟಿವಿಟಿ ಹೆಚ್ಚು?
ಇನ್ನು, ಲಾಕ್ ಡೌನ್ ಘೋಷಣೆ ಮಾಡಿದ ನಂತರ ರಾಜ್ಯದಲ್ಲಿ ಒಟ್ಟಾರೆ ಸೋಂಕು ಕಡಿಮೆಯಾಗಿದ್ದರೂ ಮೂರು ಜಿಲ್ಲೆಗಳಲ್ಲಿ ಹೆಚ್ಚು ಕಾಣಿಸಿಕೊಂಡಿದೆ. ಉತ್ತರ ಕನ್ನಡದಲ್ಲಿ 46.6, ಬಳ್ಳಾರಿಯಲ್ಲಿ 45.2 ಹಾಗೂ ಹಾಸನದಲ್ಲಿ 43.3 ಪಾಸಿಟಿವಿಟಿ ರೇಟ್ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















