ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿಯ ಬಳಿಯಲ್ಲಿ ಇಂದು ಸಂಜೆ ಕಡಿಮೆ ತೀವ್ರತೆಯ ಐಇಡಿ ಸ್ಪೋಟಗೊಂಡಿದ್ದು, ದೇಶದಾದ್ಯಂತ ಪ್ರಮುಖ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಔರಂಗಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯಿಂದ ಕೇವಲ 50 ಮೀಟರ್ ದೂರದಲ್ಲಿ ಸ್ಫೋಟ ಸಂಭವಿಸಿದ್ದು, ಯಾವುದೇ ಸಾವು, ನೋವು ಸಂಭವಿಸಿಲ್ಲ. ಆದರೆ, ಘಟನೆಯಲ್ಲಿ ಐದರಿಂದ ಆರು ವಾಹನಗಳು ಜಖಂಗೊಂಡಿವೆ ಎಂದು ವರದಿಯಾಗಿದೆ.
ಇನ್ನು, ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಇಡಿಯ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಸ್ಫೋಟದ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post