ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೋವಿಡ್19 ಪರೀಕ್ಷೆ ಮಾಡಿಸಿದ ವ್ಯಕ್ತಿಗಳ ವರದಿ ನೆಗೆಟಿವ್ ಬಂದರೆ ಆ ವಿಚಾರವನ್ನು ಸದರಿ ವ್ಯಕ್ತಿಯ ಮೊಬೈಲ್’ಗೆ ಸಂದೇಶ ರವಾನಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಎಲ್ಲ ಕೋವಿಡ್19 ಪ್ರಯೋಗಾಲಯಗಳ ನೋಡಲ್ ಅಧಿಕಾರಿಗಳು ಕೋವಿಡ್19 ಸೋಂಕಿಲ್ಲದ ವ್ಯಕ್ತಿಗಳ ಫಲಿತಾಂಶ ಬಂದ ಕೂಡಲೇ ಸಂಬಂಧಪಟ್ಟವರಿಗೆ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಸಂದೇಶ ರವಾನಿಸಬೇಕು ಎಂದು ತಿಳಿಸಲಾಗಿದೆ.
Get In Touch With Us info@kalpa.news Whatsapp: 9481252093














