ಬೆಂಗಳೂರು: ಈಗ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 22 ಸ್ಥಾನಗಳನ್ನು ಗಳಿಸಿದರೆ ಅಲ್ಲಿಂದ 24 ಗಂಟೆಯೊಳಗೆ ರಾಜ್ಯದಲ್ಲಿ ನಾವು ಸರ್ಕಾರ ರಚಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತಂತೆ ಯರಗಟ್ಟಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿರುವ ಅವರು, ಒಂದು ವೇಳೆ ನಾವು 22 ಸ್ಥಾನ ಗಳಿಸಿದರೆ ರಾಜ್ಯದಲ್ಲಿ ತತಕ್ಷಣ ಸರ್ಕಾರ ರಚಿಸುವುದು ನಿಶ್ಚಿತ. ಅಲ್ಲದೇ, ರಾಜ್ಯದಲ್ಲಿ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ, ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಸಹಕಾರ ನೀಡಿ ಎಂದು ಕರೆ ನೀಡಿದ್ದಾರೆ.
BS Yeddyurappa, BJP: If the people of Karnataka give us 22 seats in the upcoming Lok Sabha elections, we will form the government in Karnataka within 24 hours. (10.03.2019) pic.twitter.com/xkWUAWaMAc
— ANI (@ANI) March 13, 2019
ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಬಿಎಸ್’ವೈ ನೀಡಿರುವ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಭಾರೀ ಕುತೂಹಲ ಕೆರಳಿಸಿದೆ.
Discussion about this post