ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಅವರು ನಗರದ ಜಯನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ನಡೆಸಿದರು.
ಠಾಣೆಗೆ ಆಗಮಿಸಿದ ಐಜಿಪಿ ರವಿಕಾಂತೇಗೌಡ ಅವರು ಗೌರವ ವಂದನೆ ಸ್ವೀಕರಿಸಿದರು. ನಂತರ ಠಾಣೆಯ ಕಾರ್ಯವೈಖರಿ, ಪ್ರಮುಖ ಕಡತಗಳ ನಿರ್ವಹಣೆ, ಅಪರಾಧ ದಾಖಲಾತಿಗಳು ಸೇರಿದಂತೆ ವಿವಿಧ ವಿಭಾಗಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು.

Also read: Shikaripura | ಸಾಮಾಜಿಕ ಕಾಳಜಿಯೇ ರೋಟರಿ ಮುಖ್ಯ ಧ್ಯೇಯ: ರವಿ ಅಭಿಮತ
ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕುಂದುಕೊರತೆಗಳನ್ನು ಆಲಿಸಿದ ಅವರು, ಸಾರ್ವಜನಿಕರ ರಕ್ಷಣೆಗೆ ಆದ್ಯತೆ ನೀಡಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸಲಹೆ ನೀಡಿದರು.
ಪರಿಶೀಲನಾ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ., ಡಿವೈಎಸ್‌ಪಿ ಸಂಜೀವ್ ಕುಮಾರ್, ಜಯನಗರ ಠಾಣೆಯ ಇನ್ಸ್‌ಪೆಕ್ಟರ್ ರವಿ ಪಾಟೀಲ್, ಸಿ.ಇ.ಎನ್ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಹಾಗೂ ಎರಡು ಠಾಣೆಗಳ ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









