ಕಲ್ಪ ಮೀಡಿಯಾ ಹೌಸ್ | ಆನಂದಪುರ |
ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಹಾಗೂ ನೇತೃತ್ವದ ತಂಡ ಕಾಡಿನಲ್ಲಿ ನಡೆಯುತ್ತಿದ್ದ ತೂರಬಿಲ್ಲೆ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಜುಲೈ 12ರಂದು ಮಧ್ಯಾಹ್ನ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ತೂರಬಿಲ್ಲೆ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಪ್ರವೀಣ್ ದಾಳಿ ನಡೆಸಿದರು.
ದಾಳಿಯ ವೇಳೆ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದು, ಇತರೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರಿಂದ ಜೂಜಾಟಕ್ಕೆ ಬಳಸಲಾಗುತ್ತಿದ್ದ 4,200 ನಗದು ಹಾಗೂ 1 ಮುಖಬೆಲೆಯ ಎರಡು ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ಸಂತೋಷ್, ಶಿವು, ಶಾಬಾಷ್ ಎಂದು ಗುರುತಿಸಲಾಗಿದೆ.
ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









