ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಖ್ಯಾತ ವೈದ್ಯ ಡಾ.ಕೆ.ಜಿ. ಭಟ್ ಅವರ ಪತ್ನಿ, ತಾಲೂಕು ಐಎಂಎ ಅಧ್ಯಕ್ಷೆ ಡಾ.ಕವಿತಾ ಭಟ್(63) ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ.
ಇಂದು ಮಧ್ಯಾಹ್ನ ಊಟ ಮಾಡುವ ವೇಳೆಯಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಇವರು, ಇತ್ತೀಚೆಗೆ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಡಾ. ಕವಿತಾ ಭಟ್ ಹಾಗೂ ಇವರ ಪತಿ ಡಾ. ಕೆ.ಜಿ ಭಟ್ ಇಬ್ಬರು ಸಹ ನಗರದ ವಿಐಎಸ್’ಎಲ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಕವಿತಾ ಭಟ್ ಅವರು ಭೂಮಿಕಾ ವೇದಿಕೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು, ವೈದ್ಯರು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post