ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಜೆಪಿಎಸ್ ಕಾಲೋನಿಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುವುದರಿಂದ ಜನವರಿ 28 ಹಾಗೂ 29ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಆಗಾಗ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ನಗರ ಉಪವಿಭಾಗ ಸಹಾಯಕ ಕಾರ್ಯಪಾಲಕ ಅಭಿಯಂತರು ಕೋರಿದ್ದಾರೆ.ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ನ್ಯೂಟೌನ್, ನ್ಯೂ ಕಾಲೋನಿ, ಐಟಿಐ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಹಳೇ ಸಿದ್ದಾಪುರ, ಹೊಸೂರು, ತಾಂಡ್ಯಾ, ಜನ್ನಾಪುರ, ಬಿ.ಎಚ್. ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್ ಲೈನ್, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತದ ನಗರ ಪ್ರದೇಶಗಳು ಹಾಗೂ ದೊಡ್ಡೇರಿ, ಅಂತರಗಂಗೆ, ಕಾರೇಹಳ್ಳಿ, ಬಾರಂದೂರು, ಎರೇಹಳ್ಳಿ, ಮಾವಿನಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post