ಕಲ್ಪ ಮೀಡಿಯಾ ಹೌಸ್ | ಇಂಫಾಲ |
ಮಣಿಪುರದ ಇಂಫಾಲದಲ್ಲಿ ಕೊಂಚ ಶಾಂತವಾಗಿದ್ದ ವಾತಾವರಣ ಈಗ ಮತ್ತೆ ಭುಗಿಲೆದ್ದಿದ್ದು, ಭದ್ರತಾ ಪಡೆಗಳು ಹಾಗೂ ಗುಂಪಿನ ನಡುವೆ ಘರ್ಷಣೆ ನಡೆದಿದೆ.
ಪ್ರಮುಖವಾಗಿ ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, ಬೆಂಕಿ ಹಚ್ಚಲು ಯತ್ನ ನಡೆದಿದೆ. ಈ ವೇಳೆ ಭದ್ರತಾ ಪಡೆಗಳು ಹಾಗೂ ಉದ್ರಿಕ್ತ ಗುಂಪಿನ ನಡುವೆ ಘರ್ಷನೆ ನಡೆದಿದ್ದು, ಇಬ್ಬರು ನಾಗರಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಕ್ವಾಥಾ ಮತ್ತು ಕಾಂಗ್ವೈ ಪ್ರದೇಶಗಳಲ್ಲಿ ನಿನ್ನೆ ರಾತ್ರಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಲಾಗಿದ್ದು , ಇಂದು ಬೆಳಗಿನ ಜಾವದವರೆಗೂ ನಿರಂತರ ಗುಂಡಿನ ದಾಳಿಗಳು ನಡೆದಿವೆ. ಈ ವೇಳೆ ಗುಂಪನ್ನು ಚದುರಿಸಲು ಆರ್’ಎಎಫ್ ಅಶ್ರುವಾಯು ಮತ್ತು ರಬ್ಬರ್ ಬುಲೆಟ್’ಗಳನ್ನು ಹಾರಿಸಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post